ವಿಟ್ಲ: ಆಟೋದಲ್ಲಿ ಬಂದು ದುಷ್ಕರ್ಮಿಗಳಿಂದ ಮಹಿಳೆಯ ಬರ್ಬರ ಹತ್ಯೆ

ವಿಟ್ಲ: ಆಟೋದಲ್ಲಿ ಬಂದು ದುಷ್ಕರ್ಮಿಗಳಿಂದ ಮಹಿಳೆಯ ಬರ್ಬರ ಹತ್ಯೆ

ನೇಸರ ಜೂ.27: ಮಹಿಳೆಯೊಬ್ಬರ ಮೇಲೆ ಆಟೋದಲ್ಲಿ ಬಂದ ತಂಡ ಚೂರಿಯಿಂದ ಇರಿದು ಕೊಲೆಗೈದ ಘಟನೆ ಮಾಣಿ ಸಮೀಪದ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮಾಣಿಯ ಕಾಪಿಕಾಡು ನಿವಾಸಿ ದಿ.ತ್ಯಾಂಪ ಪೂಜಾರಿ ಅವರ ಪುತ್ರಿ, ಪ್ರಸ್ತುತ ಅನಂತಾಡಿಯ ದೇವಿ ನಗರ ನಿವಾಸಿ ಶಕುಂತಳಾ (35) ಸಾವನ್ನಪ್ಪಿದ ಮಹಿಳೆ ಎಂದು ತಿಳಿದು ಬಂದಿದೆ.
ಈಕೆ ಪುತ್ತೂರು ಕಡೆಯಿಂದ ಮಾಣಿ ಕಡೆಗೆ ಆಕ್ಟೀವಾ ವಾಹನದಲ್ಲಿ ತೆರಳುತ್ತಿದ್ದ ವೇಳೆ ಆಟೋ ರಿಕ್ಷಾದಲ್ಲಿ ಬಂದ ತಂಡ ಮಾರಕಾಯುಧ ಗಳಿಂದ ದಾಳಿ ನಡೆಸಿದೆ. ತತ್ ಕ್ಷಣ ಆಕೆಯನ್ನು ಆಸ್ಪತ್ರೆಗೆ ಕೊಂಡೊಯ್ದರೂ ಆಕೆ ಬದುಕುಳಿಯಲಿಲ್ಲ ಎಂದು ತಿಳಿದು ಬಂದಿದೆ. ಪೊಲೀಸರು ಸ್ಥಳಕ್ಕೆ ಬಂದು ಮಾಹಿತಿ ಕಲೆ ಹಾಕುತ್ತಿದ್ದಾರೆ.

ವೀಕ್ಷಿಸಿ SUBSCRIBERS ಮಾಡಿ🙏🏻

Leave a Reply

You May Have Missed

error: Content is protected !!