ಕಡಬ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಮೃತ್ಯು

ಕಡಬ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಮೃತ್ಯು

ನೇಸರ ಜೂ.27: ವಿದ್ಯುತ್ ಶಾಕ್ ತಗುಲಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೋಡಿಂಬಾಳ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.
ಮೃತ ವ್ಯಕ್ತಿಯನ್ನು ಕೊಡಿಂಬಾಳ ಕೊಡೆಂಕೇರಿ ನಿವಾಸಿ ತೋಮಸ್(63) ಎಂದು ಗುರುತಿಸಲಾಗಿದೆ. ಅವರು ತನ್ನ ಮನೆಯಲ್ಲಿ ತೆಂಗಿನಕಾಯಿ ಕೀಳುತ್ತಿದ್ದ ವೇಳೆ ಅಲ್ಯೂಮಿನಿಯಂ ಕೊಕ್ಕೆ ವಿದ್ಯುತ್ ತಂತಿಗೆ ತಾಗಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಕಡಬ ಠಾಣಾಧಿಕಾರಿ ಆಂಜನೇಯ ರೆಡ್ಡಿ, ಮೆಸ್ಕಾಂ ಎಇಟಿ ಸಜಿಕುಮಾರ್, ಮೆಸ್ಕಾಂ ಎಇಇ ಸತ್ಯನಾರಾಯಣ, ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವೀಕ್ಷಿಸಿ SUBSCRIBERS ಮಾಡಿ🙏🏻

Leave a Reply

You May Have Missed

error: Content is protected !!