ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಇಂದು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಇಂದು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ನೇಸರ ನ13: ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಇಂದು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಸ್ಕೌಟ್ ಮತ್ತು ಗೈಡ್ಸ್ ನ ಧ್ವಜಾರೋಹಣ ಮಾಡಲಾಯಿತು. ಸ್ಕೌಟ್ ಮಾಸ್ಟರ್ ಎಂ.ಐ ತೋಮಸ್, ಮಧು ಎ.ಜೆ ರವರ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಿತು. ಸಂಸ್ಥೆಯ ಸಂಚಾಲಕ ಅಬ್ರಹಾಂ ವರ್ಗೀಸ್ ದೀಪ ಬೆಳಗಿಸಿ ಜವಾಹರಲಾಲ್ ನೆಹರುರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಸ್ಥೆಯ ಸಂಚಾಲಕರು ಮಕ್ಕಳ ದಿನಾಚರಣೆಯ ವಿಶೇಷತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪ್ರಥಮ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಸ್ವಸ್ತಿಕ್ ನಿಸರ್ಗದ ಬಗ್ಗೆ ರಚಿಸಿದ ಚಿತ್ರವನ್ನು ಅನಾವರಣಗೊಳಿಸಿದರು. ಬಳಿಕ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಮಕ್ಕಳ ದಿನಾಚರಣೆಯ ಅಂಗವಾಗಿ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜು ವಿಭಾಗದ ಪ್ರಾಚಾರ್ಯ ಏಲಿಯಾಸ್ ಎಂ.ಕೆ, ಕನ್ನಡ ಮಾಧ್ಯಮ ವಿಭಾಗದ ಮುಖ್ಯಗುರು ಎಂ.ಐ ತೋಮಸ್, ಆಂಗ್ಲ ಮಾಧ್ಯಮ ವಿಭಾಗದ ಮುಖ್ಯಗುರು ಹರಿಪ್ರಸಾದ್.ಕೆ, ಶಿಕ್ಷಕವರ್ಗ, ವಿದ್ಯಾರ್ಥಿವೃಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿದ್ಯಾರ್ಥಿ ನಾಯಕ ಶರುಣ್ ರಾಜ್ ಸ್ವಾಗತಿಸಿ ವಿದ್ಯಾರ್ಥಿ ಕಾರ್ಯದರ್ಶಿ ವೈಶಾಲಿ ವಂದಿಸಿದರು, ಮೇಘ, ಮನ್ವಿತ್ ಪಾಹಿಮಾ ಕಾರ್ಯಕ್ರಮ ನಿರೂಪಿಸಿದರು.

Leave a Reply

You May Have Missed

error: Content is protected !!