ತೋಟಕ್ಕೆಂದು ಹೋದವರು ಮನೆಗೆ ವಾಪಾಸು ಹಿಂದಿರುಗದೆ ಕಾಣೆ

ತೋಟಕ್ಕೆಂದು ಹೋದವರು ಮನೆಗೆ ವಾಪಾಸು ಹಿಂದಿರುಗದೆ ಕಾಣೆ

ನೇಸರ ಜು.01: ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಅಡ್ಯ ನಿವಾಸಿ ಲಿಂಗಪ್ಪ ಪೂಜಾರಿ(65 ವ) ಎಂಬವರು ತೋಟಕ್ಕೆಂದು ಹೋದವರು ಮನೆಗೆ ವಾಪಾಸು ಹಿಂದಿರುಗದೆ ಕಾಣೆಯಾಗಿರುವ ಘಟನೆ ಜೂ.30 ರಂದು ನಡೆದಿದ್ದು ಅವರು ತೋಟದ ಸಮೀಪವೇ ಹರಿಯುತ್ತಿರುವ ನದಿಯಲ್ಲಿ ನೀರಿನ ಸೆಳೆತಕ್ಕೆ ಸಿಲುಕಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು ಮುಳುಗು ತಜ್ಞರ ಸಹಕಾರದೊಂದಿಗೆ ಪೊಲೀಸರು ಹಾಗೂ ಅಗ್ನಿ ಶಾಮಕ ದಳದವರು ಹುಡುಕಾಟ ನಡೆಸಿದ್ದಾರೆ.

ಜೂ.30 ರಂದು ಸುರಿದ ಭಾರೀ ಮಳೆ ಸುರಿದಿದ್ದು ನದಿಯಲ್ಲಿ ನೀರಿನ ಹರಿವು ಹೆಚ್ಚಿತು. ತೋಟದ ಸಮೀಪವೇ ನದಿ ಇದ್ದು, ನದಿಯಲ್ಲಿ ಬಿದ್ದಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.
ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್, ಅಗ್ನಿಶಾಮಕದಳ, ಸ್ಥಳೀಯರು ಧಾವಿಸಿ ಮುಳುಗು ತಜ್ಞರ ಸಹಕಾರದೊಂದಿಗೆ ಹುಡುಕಾಟ ನಡೆಸುತ್ತಿದ್ದಾರೆ ಯಾವುದೇ ಕುರುಹುಗಳು ಪತ್ತೆಯಾಗಿಲ್ಲ. ಕತ್ತಲು ಆವರಿಸಿದ ಕಾರಣ ಶುಕ್ರವಾರ ಸಂಜೆ ಬಳಿಕ ಕಾರ್ಯಾಚರಣೆ ನಿಲ್ಲಿಸಲಾಗಿದೆ.

ವೀಕ್ಷಿಸಿ SUBSCRIBERS ಮಾಡಿ🙏🏻

Leave a Reply

You May Have Missed

error: Content is protected !!