||ಕಡಬ ಪೇಟೆಯಲ್ಲಿ ವಿದ್ಯಾರ್ಥಿಗೆ ಕಚ್ವಿದ ನಾಯಿ|| ವಿದ್ಯಾರ್ಥಿ ಆಸ್ಪತ್ರೆ ಗೆ ದಾಖಲು.

||ಕಡಬ ಪೇಟೆಯಲ್ಲಿ ವಿದ್ಯಾರ್ಥಿಗೆ ಕಚ್ವಿದ ನಾಯಿ|| ವಿದ್ಯಾರ್ಥಿ ಆಸ್ಪತ್ರೆ ಗೆ ದಾಖಲು.

ನೇಸರ ನ17: ನಾಯಿಯೊಂದು ಕಡಿದ ಪರಿಣಾಮ ವಿದ್ಯಾರ್ಥಿಯೋರ್ವ ಗಾಯಗೊಂಡ ಘಟನೆ ಕಡಬ ಪೇಟೆಯಲ್ಲಿ ನ.17 ರಂದು ನಡೆದಿದೆ. ಗಾಯಗೊಂಡ ಬಾಲಕನನ್ನು ಕಡಬ ನಿವಾಸಿ ಹಮೀದ್ ಎಂಬವರ ಪುತ್ರ ಅಫ್ನಾನ್ ಎಂದು ಗುರುತಿಸಲಾಗಿದೆ.ಮದರಸ ಬಿಟ್ಟು ತೆರಳುತ್ತಿದ್ದ ಬಾಲಕನ ಮೇಲೆ ನಾಯಿ ಎರಗಿದ್ದು, ಕೈಗೆ ಕಚ್ಚಿದೆ‌ ಎಂದು ತಿಳಿದುಬಂದಿದೆ. ಬಾಲಕನಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ನಾಯಿಯನ್ನು ಸಾರ್ವಜನಿಕರು ಹೊಡೆದು ಕೊಂದಿದ್ದು, ಈ ಬಗ್ಗೆ ಪಟ್ಟಣ ಪಂಚಾಯತ್ ಗೆ ಮಾಹಿತಿ ನೀಡಿದ್ದಾರೆ.

Leave a Reply

You May Have Missed

error: Content is protected !!