ಬಸ್ಸು ಹಾಗೂ ಕಾರಿನ ಮಧ್ಯೆ ಡಿಕ್ಕಿ

ಬಸ್ಸು ಹಾಗೂ ಕಾರಿನ ಮಧ್ಯೆ ಡಿಕ್ಕಿ

ನೇಸರ ನ17: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಘಟನೆ ಕಡಬ-ಕೋಡಿಂಬಾಳ ಸಮೀಪ ನಡೆದಿದೆ.
ಕಡಬದಿಂದ ಎಡಮಂಗಲ ಮಾರ್ಗವಾಗಿ ಪುತ್ತೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

You May Have Missed

error: Content is protected !!