||ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿದ ||-ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್‌

||ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿದ ||-ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್‌

ನೇಸರ ನ20: ದ.ಕ.ಉಡುಪಿ ಮತಕ್ಷೇತ್ರದಿಂದ ವಿಧಾನ ಪರಿಷತ್ ಸ್ಥಾನಕ್ಕೆ ಸ್ಪರ್ಧಿಸುವ ನಿರ್ಧಾರ ಮಾಡಿ ಉಭಯ ಜಿಲ್ಲೆಗಳ ರಾಜಕೀಯ ರಂಗದಲ್ಲಿ ಸಂಚಲನ ಮೂಡಿಸಿದ್ದ ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್‌ರವರು ಇದೀಗ ಸ್ಪರ್ಧಾ ನಿರ್ಧಾರದಿಂದ ಹಿಂದೆ ಸರಿಯಲು ನಿರ್ಧರಿಸಿ ಅಚ್ಚರಿ ಮೂಡಿಸಿದ್ದಾರೆ.
ಜಿಲ್ಲೆಗಳ ಸಹಕಾರಿ ಧುರೀಣರು ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯ ಮಾಡಿದ ಹಿನ್ನಲೆಯಲ್ಲಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸ್ಪರ್ಧೆಯ ನಿರ್ಧಾರ ಮಾಡಿದ್ದರು. ಅವರ ಚುನಾವಣಾ ಕಚೇರಿ ನ.16 ರಂದು ಮಂಗಳೂರಿನಲ್ಲಿ ಅದ್ಧೂರಿಯಾಗಿ ಉದ್ಘಾಟನೆಗೊಂಡಿತ್ತು. ಆದರೆ ಇದೀಗ ಅವರು ಸ್ಪರ್ಧಿಸದಿರಲು ನಿರ್ಧರಿಸಿರುವುದಾಗಿ ತಿಳಿದು ಬಂದಿದೆ. ಸಹಕಾರ ಕ್ಷೇತ್ರದಲ್ಲಿ ಪಕ್ಷಾತೀತನಾಗಿ ತಾನು ಉಳಿಯುವ ಬಯಕೆಯಿಂದ ಈ ನಿರ್ಧಾರಕ್ಕೆ ಬಂದಿರುವುದಾಗಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿರುವುದಾಗಿ ವರದಿಯಾಗಿದೆ. ಈ ನಿರ್ಧಾರದ ಹಿಂದಿರುವ ಕಾರಣಗಳೇನೆಂದು ತಿಳಿದು ಬಂದಿಲ್ಲ

Leave a Reply

You May Have Missed

error: Content is protected !!