ಕುಕ್ಕೆ ಶ್ರೀ ಸುಬ್ರಮಣ್ಯೇಶ್ವರ ಕಾಲೇಜು ಸುಬ್ರಹ್ಮಣ್ಯ ➽ ಎನ್ ಎಸ್ ಎಸ್ ಘಟಕ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಕುಕ್ಕೆ ಶ್ರೀ ಸುಬ್ರಮಣ್ಯೇಶ್ವರ ಕಾಲೇಜು ಸುಬ್ರಹ್ಮಣ್ಯ ➽ ಎನ್ ಎಸ್ ಎಸ್ ಘಟಕ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ನೇಸರ ಜು.23: ಕುಕ್ಕೆ ಶ್ರೀ ಸುಬ್ರಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಮಣ್ಯದ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜು ಸುಬ್ರಹ್ಮಣ್ಯ ಎನ್ ಎಸ್ ಎಸ್ ಘಟಕ ಜೊತೆಯಾಗಿ ದಿನಾಂಕ 23.7.22 ರಂದು ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಸುಬ್ರಹ್ಮಣ್ಯ ಇಲ್ಲಿನ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಸಮಾರಂಭವನ್ನು ಏರ್ಪಡಿಸಿತು.

ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀಮತಿ ಹರ್ಷಿತ ಸಿ. ಅಧ್ಯಕ್ಷ ಸ್ಥಾನವನ್ನು ವಹಿಸಿದ್ದರು. ಶ್ರೀ ಸುಬ್ರಹ್ಮಣ್ಯೇಶ್ವರ ಪ್ರೌಢಶಾಲಾ ವಿಭಾಗದ ಮುಖ್ಯಸ್ಥರಾದ ಯಶವಂತ ರೈ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ವೇದಿಕೆಯಲ್ಲಿ ಕೆಎಸ್ಎಸ್ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಘಟಕದ ಯೋಜನಾಧಿಕಾರಿಗಳಾದ ಶ್ರೀಮತಿ ಆರತಿ, ಶ್ರೀಮತಿ ನಮಿತಾ M.A,SSPU ಯೋಜನಾಧಿಕಾರಿಗಳಾದ ಶ್ರೀಮತಿ ಸೌಮ್ಯ A, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಸುಶೀಲಾ ಪಿ.ಜಿ, SDMC ಉಪಾಧ್ಯಕ್ಷರಾದ ಸತೀಶ ಉಪಸ್ಥಿತರಿದ್ದರು. ಸ್ವಯಂಸೇವಕ ಸಂತೋಷ್ ಸ್ವಾಗತಿಸಿದರು. ರಮ್ಯಾ ಧನ್ಯವಾದ ಸಮರ್ಪಿಸಿದರು. ಸುಶ್ಮಿತಾ ಕೆ. ಕಾರ್ಯಕ್ರಮ ನಿರೂಪಿಸಿದರು. ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು.

Leave a Reply

You May Have Missed

error: Content is protected !!