ಕೊಕ್ಕಡ ಶ್ರೀ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ಶ್ರೀ ಮಹಾಗಣಪತಿ ಯಾಗ

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ಶ್ರೀ ಮಹಾಗಣಪತಿ ಯಾಗ

ನೇಸರ ನ22: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಎಡಮನೆ ದಾಮೋದರ ತಂತ್ರಿಗಳ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ಶ್ರೀ ಮಹಾಗಣಪತಿ ಯಾಗ, ಶತರುದ್ರಾಭಿಷೇಕ, ಮಹಾರುದ್ರಯಾಗ ನ.22 ರಂದು ಜರುಗಿತು.
ವೇದಮೂರ್ತಿ ಘನಪಾಠಿ ಅಂಶುಮಾನ್ ಅಭ್ಯಂಕರ್ ಧರ್ಬೆತಡ್ಕ ವೇದೋಪಾಸನಾ ಸಮಿತಿಯರವರ ಯಾಜಕತ್ವದಲ್ಲಿ (ರುದ್ರ ಜಪ ಪುರಶ್ಚರಣ ಸಹಿತ),ಮಹಾಪೂಜೆ-ಅನ್ನಸಂತರ್ಪಣೆ ನೆರವೇರಿತು. ಈ ಸಂದರ್ಭದಲ್ಲಿ ದೇವಸ್ಥಾನದ ಪವಿತ್ರಪಾಣಿ ರಾಧಾಕೃಷ್ಣ ಯಡಪಡಿತ್ತಾಯ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಕೆದಿಲಾಯ, ಸಮಿತಿ ಸದಸ್ಯರು ಹಾಗೂ ಊರ-ಪರವೂರ ಭಕ್ತಾಧಿಗಳು ಭಾಗವಹಿಸಿದ್ದರು.

Leave a Reply

You May Have Missed

error: Content is protected !!