ಧರ್ಮಸ್ಥಳ ಲಕ್ಷದೀಪೋತ್ಸವ: ನ.29 ರಿಂದ ಡಿ. 4

ನೇಸರ ನ.23: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷ ದೀಪೋತ್ಸವ ಇದೇ ನ.29 ರಿಂದ ಡಿ. 4ರ ವರೆಗೆ ನಡೆಯಲಿವೆ.
ಡಿ.2 ರಂದು ಗುರುವಾರ ಸಂಜೆ 5 ಗಂಟೆಗೆ ಅಮೃತವರ್ಷಿಣಿ ಸಭಾ ಭವನದಲ್ಲಿ ಸರ್ವಧರ್ಮ ಸಮ್ಮೇಳನದ 89ನೇ ಅಧಿವೇಶನವನ್ನು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸುವರು.
ಬೆಂಗಳೂರಿನ ಎಸ್.ವ್ಯಾಸ ಯೋಗ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ರಾಮಚಂದ್ರ ಭಟ್ಟ ಅಧ್ಯಕ್ಷತೆ ವಹಿಸುವರು. ಸಾಗರದ ಖ್ಯಾತ ಸಾಹಿತಿ ಸಫ್ರಾಜ್ ಚಂದ್ರಗುತ್ತಿ, ಮೈಸೂರು ವಿ.ವಿ.ಯ ನಿವೃತ್ತ ಪ್ರಾಧ್ಯಾಪಕಿ ಡಾ.ಎಂ.ಎಸ್.ಪದ್ಮ ಮತ್ತು ಶಿವಮೊಗ್ಗ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವೀರೇಶ್ ವಿ. ಮೊರಾಸ್ ಧಾರ್ಮಿಕ ಉಪನ್ಯಾಸ ನೀಡುವರು.

ಡಿ.3 ರಂದು ಸಾಹಿತ್ಯ ಸಮ್ಮೇಳನದ 89ನೇ ಅಧಿವೇಶನವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಉದ್ಘಾಟಿಸುವರು.ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಮಲ್ಲೇಪುರಂ ಜಿ.ವೆಂಕಟೇಶ್ ಅಧ್ಯಕ್ಷತೆ ವಹಿಸುವರು.ಸಾಗರದ ಖ್ಯಾತ ಸಾಹಿತಿ ಡಾ.ಪಿ.ಗಜಾನನ ಶರ್ಮ, ಚಿತ್ರದುರ್ಗದ ಡಾ.ಪಿ. ಚಂದ್ರಿಕಾ ಮತ್ತು ಬೆಂಗಳೂರಿನ ಡಾ.ಕೆ.ಪಿ.ಪುತ್ತೂರಾಯ ಉಪನ್ಯಾಸ ನೀಡುವರು.
ನ.29 ರಂದು ಹೊಸಕಟ್ಟೆ ಉತ್ಸವ, ನ.30 ರಂದು ಕೆರೆಕಟ್ಟೆ ಉತ್ಸವ, ಡಿ.1 ರಂದು ಲಲಿತೋದ್ಯಾನ ಉತ್ಸವ, ಡಿ.2 ರಂದು ಕಂಚಿಮಾರುಕಟ್ಟೆ ಉತ್ಸವ, ಡಿ.3 ರಂದು ಗೌರಿಮಾರುಕಟ್ಟೆ ಉತ್ಸವ ಮತ್ತು ಲಕ್ಷ ದೀಪೋತ್ಸವ, ಡಿ.4 ಶನಿವಾರ ಭಗವಾನ್ ಶ್ರೀಚಂದ್ರನಾಥಸ್ವಾಮಿಯ ಸಮವಸರಣ ಪೂಜೆಯೊಂದಿಗೆ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಸಮಾಪನಗೊಳ್ಳುತ್ತವೆ.
ಅಮೃತವರ್ಷಿಣಿ ಸಭಾ ಭವನದಲ್ಲಿ ಡಿ.1 ರಿಂದ ಡಿ.3 ರವರೆಗೆ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.














Leave a Reply