ಕಡಬ ಎಸಿ ನೇತೃತ್ವದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಜಾಗೃತಿ ಜಾಥ

ಕಡಬ ಎಸಿ ನೇತೃತ್ವದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಜಾಗೃತಿ ಜಾಥ

ನೇಸರ ಆ.13: ಕಡಬ ತಾಲೂಕು ಕಚೇರಿ, ಪಟ್ಟಣ ಪಂಚಾಯತ್, ತಾಲೂಕು ಪಂಚಾಯತ್, ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ಎನ್ ಎನ್ ಎಸ್ ಘಟಕದ ಸಹಯೋಗದಲ್ಲಿ ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ನೇತೃತ್ವದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಜನಜಾಗೃತಿ ಜಾಥಾ ಕಡಬದಲ್ಲಿ ಇಂದು (ಆ.13) ನಡೆಯಿತು.

ಸಹಾಯಕ ಆಯುಕ್ತರು ಕಡಬ ತಹಸೀಲ್ದಾರ್ ಕಚೇರಿ ಬಳಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಡಬ ತಹಸೀಲ್ದಾರ್ ಅನಂತಶಂಕರ ಬಿ., ಉಪತಹಸೀಲ್ದಾರ್ ಮನೋಹರ್, ಕಡಬ ಪಟ್ಟಣ ಪಂಚಾಯತ್ ನ ಮುಖ್ಯಾಧಿಕಾರಿ ಪಕೀರ ಮೂಲ್ಯ, ಕಡಬ ತಾಲೂಕು ಪಂಚಾಯತ್ ನ ಸಹಾಯಕ ನಿರ್ದೇಶಕ ಚೆನ್ನಪ್ಪ ಗೌಡ ಕಜೆಮೂಲೆ, ಕಡಬ ಸಹಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜನಾರ್ದನ, ಉಪನ್ಯಾಸಕ ವಾಸುದೇವ ಗೌಡ ಕೋಲ್ಪೆ, ಕಂದಾಯ ನಿರೀಕ್ಷಕ ಪೃಥ್ವಿರಾಜ್, ಪಟ್ಟಣ ಪಂಚಾಯತ್ ನ ಸಿಬ್ಬಂದಿ ಹರೀಶ್ ಬೆದ್ರಾಜೆ ಹಾಗೂ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳು ಮತ್ತಿತ್ತರು ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!