ನೆಲ್ಯಾಡಿ: ಸಂತ ಜಾರ್ಜ್ ಪದವಿಪೂರ್ವ ಕಾಲೇಜು ನ ಎನ್ಎಸ್ಎಸ್ ಘಟಕದ ವತಿಯಿಂದ ಹರ್ ಘರ್ ತಿರಂಗ ಅಭಿಯಾನ

ನೆಲ್ಯಾಡಿ: ಸಂತ ಜಾರ್ಜ್ ಪದವಿಪೂರ್ವ ಕಾಲೇಜು ನ ಎನ್ಎಸ್ಎಸ್ ಘಟಕದ ವತಿಯಿಂದ ಹರ್ ಘರ್ ತಿರಂಗ ಅಭಿಯಾನ

ನೇಸರ ಆ.13: ಸಂತ ಜಾರ್ಜ್ ಪದವಿಪೂರ್ವ ಕಾಲೇಜು ನೆಲ್ಯಾಡಿ ಕಡಬ ತಾಲೂಕು ದ. ಕ. ಇದರ ಎನ್ಎಸ್ಎಸ್ ಘಟಕದ ವತಿಯಿಂದ ಹರ್ ಘರ್ ತಿರಂಗ ಅಭಿಯಾನದ ಮೂಲಕ ಮನೆ ಮನೆಗಳಿಗೆ ರಾಷ್ಟ್ರಧ್ವಜವನ್ನು ವಿತರಿಸಲಾಯಿತು.

NESARA|| WhatsApp ||GROUPS

                             

 

                                                       

 

ಸಂತ ಜಾರ್ಜ್ ವಿದ್ಯಾ ಸಂಸ್ಥೆಗಳ ಸಂಚಾಲಕ ಅಬ್ರಹಾಂ ವರ್ಗೀಸ್ ರವರ ನಿರ್ದೇಶನದಂತೆ ಏಲಿಯಾಸ್.ಎಂ.ಕೆ ಹಾಗೂ ಎನ್ಎಸ್ಎಸ್ ಘಟಕದ ಕಾರ್ಯಕ್ರಮ ಅಧಿಕಾರಿ ವಿಶ್ವನಾಥ ಶೆಟ್ಟಿ.ಕೆ ರವರ ನೇತೃತ್ವದಲ್ಲಿ ರಾಷ್ಟ್ರಧ್ವಜ ವಿತರಣಾ ಕಾರ್ಯಕ್ರಮ ನಡೆಯಿತು. ಸಂತ ಜಾರ್ಜ್ ವಿದ್ಯಾ ಸಂಸ್ಥೆಯ ಪೂರ್ವ ವಿದ್ಯಾರ್ಥಿ ಅಬ್ದುಲ್ ರಹಿಮಾನ್ ರವರು ತಮ್ಮ ಮನೆಯಲ್ಲಿ ರಾಷ್ಟ್ರಧ್ವಜವನ್ನು ಸ್ವೀಕರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ನಂತರ ಎನ್ಎಸ್ಎಸ್ ಸ್ವಯಂಸೇವಕರು ಸುಮಾರು 50 ಮನೆಗಳಿಗೆ ರಾಷ್ಟ್ರಧ್ವಜವನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಎನ್ಎಸ್ಎಸ್ ಘಟಕ ನಾಯಕ ಲಿಖಿತ್ ನಾಯಕಿ ಶ್ರೇಯ ಹಾಗೂ ಎನ್ ಎಸ್ ಎಸ್ ಸ್ವಯಂಸೇವಕರು ಭಾಗವಹಿಸಿದರು.

Leave a Reply

You May Have Missed

error: Content is protected !!