ಕಡಬ: ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ವೇಳೆ ಕುಸಿದು ಬಿದ್ದ ನಿವೃತ್ತ ಸೈನಿಕ ಮೃತ್ಯು

ಕಡಬ: ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ವೇಳೆ ಕುಸಿದು ಬಿದ್ದ ನಿವೃತ್ತ ಸೈನಿಕ ಮೃತ್ಯು

ಗಂಗಾಧರ ಗೌಡ

ನೇಸರ ಆ.15: ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡ ನಿವೃತ್ತ ಸೈನಿಕರೋರ್ವರು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ. ನಿವೃತ್ತ ಸೈನಿಕ ಗಂಗಾಧರ ಗೌಡ ಮೃತರು ಎಂದು  ತಿಳಿದುಬಂದಿದೆ. ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆ ಸ್ಟೇಷನ್ ಅಮೃತ ಸರೋವರದ ಬಳಿ ನಿವೃತ್ತ ಸೈನಿಕ ಗಂಗಾಧರ ಗೌಡ ಅವರು ಧ್ವಜ ವಂದನೆಯ ಮಾಹಿತಿ ನೀಡಿ ಧ್ವಜಾರೋಹಣಕ್ಕೆ ಸಿದ್ಧವಾಗುತ್ತಿದ್ದ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ವೇಳೆ ದಾರಿ ಮಧ್ಯದಲ್ಲಿ ಮೃತಪಟ್ಟರು ಎಂದು ತಿಳಿದುಬಂದಿದೆ.

Leave a Reply

You May Have Missed

error: Content is protected !!