ಕೋವಿಡ್-19 ರೂಪಾಂತರ: ರಾಜ್ಯ ಸರಕಾರ ಕೈಗೊಂಡ ಪ್ರಮುಖ ತೀರ್ಮಾನಗಳು

ಕೋವಿಡ್-19 ರೂಪಾಂತರ: ರಾಜ್ಯ ಸರಕಾರ ಕೈಗೊಂಡ ಪ್ರಮುಖ ತೀರ್ಮಾನಗಳು

ನೇಸರ ನ 27: ಕೋವಿಡ್ 19,ರೂಪಾಂತರಿ ವೈರಸ್ ಒಮಿಕ್ರಾನ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನ 27 ಶನಿವಾರ ನಡೆದ ಸಭೆಯಲ್ಲಿ ಕೈಗೊಂಡ ಪ್ರಮುಖ ತೀರ್ಮಾನಗಳು ಹೀಗಿವೆ.

ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಗಿ ವಿಚಕ್ಷಣೆ ಕೈಗೊಳ್ಳುವುದು.

ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯ ಪ್ರವೇಶಿಸುವವರಿಗೆ ಆರ್.ಟಿ.ಪಿ.ಸಿ.ಆರ್. ನೆಗೆಟಿವ್ ರಿಪೋರ್ಟ್ ಕಡ್ಡಾಯ.

ಕೊಡಗು, ದಕ್ಷಿಣ ಕನ್ನಡ, ಮೈಸೂರು ಮತ್ತು ಚಾಮರಾಜ ನಗರ ಗಡಿಗಳಲ್ಲಿ ಕಟ್ಟೆಚ್ಚರ, ತಪಾಸಣೆ ತೀವ್ರ.

ಗಡಿ ಜಿಲ್ಲೆಗಳಲ್ಲಿ ಮೂರು ಶಿಫ್ಟ್ ಗಳಲ್ಲಿ ಕೆಲಸ ಮಾಡುವಂತೆ ಡಿಸಿಗಳಿಗೆ ಸೂಚನೆ. ಇದಕ್ಕೆ ಎಲ್ಲ ಇಲಾಖೆಗಳ ಸಹಕಾರ ಪಡೆಯುವುದು.

16 ದಿನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾ
ಸಬೇಕು

ಹಾಸ್ಟೆಲ್ ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗಟಿವ್ ರಿಪೋರ್ಟ್ ಬಂದ ನಂತರದ 7 ನೇ ದಿನಕ್ಕೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡುವುದು.

ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರನ್ನು ಕಡ್ಡಾಯವಾಗಿ ಪರೀಕ್ಷೆಗೊಳಪಡಿಸಬೇಕು.

ಹೋಟೇಲು, ರೆಸ್ಟೋರೆಂಟ್‌ಗಳು, ಸಿನಿಮಾ ಹಾಲ್‌ಗಳು, ಈಜುಗೊಳ, ಸಾರ್ವಜನಿಕ ಗ್ರಂಥಾಲಯ, ಮೃಗಾಲಯಗಳು ಮತ್ತು ಜೈವಿಕ ಉದ್ಯಾನವನಗಳು, ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಪಡೆದಿರಬೇಕು.

ವೈದ್ಯಕೀಯ ಕಾಲೇಜು ಮತ್ತು ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸುವುದು

ಸರ್ಕಾರಿ ಕಚೇರಿಗಳಲ್ಲಿ ಹಾಗೂ ಮಾಲ್‌ಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆಯಬೇಕು. ಸರ್ಕಾರಿ ಕಚೇರಿ ಹಾಗೂ ಮಾಲ್‌ಗಳಲ್ಲಿಯೇ ಲಸಿಕೆ ನೀಡಲು ವ್ಯವಸ್ಥೆ ಕಲ್ಪಿಸುವುದು

ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಗಳನ್ನು ತೀವ್ರಗೊಳಿಸುವುದು. ನೆಗಟಿವ್ ಇದ್ದವರಿಗೆ ನಗರ ಪ್ರವೇಶಕ್ಕೆ ಅನುಮತಿ.

ಪಾಸಿಟಿವ್ ಇದ್ದವರಿಗೆ ಚಿಕಿತ್ಸೆಗೆ ಆಸ್ಪತ್ರೆಗೆ ಕಳುಹಿಸುವುದು.

ಕಾಲೇಜುಗಳಲ್ಲಿ ಸಾಂಸ್ಕ್ರತಿಕ ಕಾರ್ಯಕ್ರಮ ಮುಂದೂಡಲು ಸಲಹೆ.

Leave a Reply

You May Have Missed

error: Content is protected !!