ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ನೇಸರ ಆ.18: ಕುಕ್ಕೆ ಶ್ರೀ ಸುಬ್ರಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಮಣ್ಯ ಮತ್ತು ಆಂತರಿಕ ಗುಣಮಟ್ಟದ ಭರವಸಾ ಕೋಶ ಇದರ ಸಹಯೋಗದೊಂದಿಗೆ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೋಹನ್ ರಾಮ ಸುಳ್ಳಿ ಸಂಚಾಲಕರು ಕೆ.ಎಸ್.ಎಸ್ ಕಾಲೇಜು ಸುಬ್ರಮಣ್ಯ ಇವರು ವಹಿಸಿದರು. ಶ್ರೀಮತಿ ಶೋಭಾ ಗಿರಿಧರ್ ಸದಸ್ಯರು ವ್ಯವಸ್ಥಾಪನ ಸಮಿತಿ ಕುಕ್ಕೆ ಶ್ರೀ ಸುಬ್ರಮಣ್ಯೇಶ್ವರ ದೇವಸ್ಥಾನ ಇವರು ಉದ್ಘಾಟಿಸಿದರು ಆಂತರಿಕ ಗುಣಮಟ್ಟದ ಭರವಸಾ ಕೋಶ ಇದರ ಸಂಯೋಜಕರಾದ ಡಾ.ಗೋವಿಂದ ಎನ್.ಎಸ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಡಾ.ದಿನೇಶ ಪಿ.ಟಿ ಸ್ವಾಗತಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶ್ರೀಮತಿ ಶೀಲತ ಕಮಿಲಾ ವಂದಿಸಿದರು. ಕುಮಾರಿ ವೈಷ್ಣವಿ ಮತ್ತು ಶರಣ್ಯ ಪ್ರಾರ್ಥಿಸಿದರು. ಶ್ರೀಮತಿ ಸುಮಿತ್ರ ಕಾರ್ಯಕ್ರಮವನ್ನು ನಿರೂಪಿಸಿದರು ಡಾ.ಪ್ರಸಾದ್ ಎನ್, ಶ್ರೀಮತಿ ಲತಾ ಬಿ. ಟಿ, ರಮನಾಥ ಕಾರ್ಯಕ್ರಮವನ್ನು ಸಂಯೋಜಿಸಿದರು.

Leave a Reply

You May Have Missed

error: Content is protected !!