ಪುಂಜಾಲಕಟ್ಟೆಯಲ್ಲಿ ಬೈಕ್‌ಗಳು ಮುಖಾಮುಖಿ ಢಿಕ್ಕಿ: ವಿದ್ಯಾರ್ಥಿ ಸಾವು

ಪುಂಜಾಲಕಟ್ಟೆಯಲ್ಲಿ ಬೈಕ್‌ಗಳು ಮುಖಾಮುಖಿ ಢಿಕ್ಕಿ: ವಿದ್ಯಾರ್ಥಿ ಸಾವು

ನೇಸರ ಆ.29: ಪುಂಜಾಲಕಟ್ಟೆ ಬೈಕ್‌ಗಳು ಮುಖಾಮುಖಿ ಢಿಕ್ಕಿಯಾಗಿ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ಘಟನೆ ಸೋಮವಾರ ಬೆಳಗ್ಗೆ ಪುಂಜಾಲಕಟ್ಟೆಯಲ್ಲಿ ಸಂಭವಿಸಿದೆ.

ಬೆಳ್ತಂಗಡಿ ತಾಲೂಕಿನ ಕರಾಯ ನಿವಾಸಿ ವಿದ್ಯಾರ್ಥಿ ಶಫೀಕ್ ಮೃತ ದುರ್ದೈವಿ.
ಶಫೀಕ್ ಕರಾಯದಿಂದ ಮಂಗಳೂರಿಗೆ ಬೈಕ್ ನಲ್ಲಿ ಹೋಗುತ್ತಿರುವಾಗ ಇನ್ನೊಂದು ಬೈಕ್ ಢಿಕ್ಕಿ ಹೊಡೆದಿದೆ. ಇನ್ನೊಂದು ಬೈಕ್ ನಲ್ಲಿದ್ದವರು ಮಡಂತ್ಯಾರಿನ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುವವರಾಗಿದ್ದು ಎನ್ನಲಾಗಿದ್ದು, ಇಬ್ಬರೂ ಗಾಯಗೊಂಡಿದ್ದಾರೆ.
ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

You May Have Missed

error: Content is protected !!