ವಿಧಾನ ಪರಿಷತ್ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ವಿಧಾನ ಪರಿಷತ್ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ನೇಸರ ಡಿ1: ಭಾರತೀಯ ಜನತಾ ಪಾರ್ಟಿಯ ವಿಧಾನ ಪರಿಷತ್ ಅಭ್ಯರ್ಥಿಯಾದ ಕೋಟ ಶ್ರೀನಿವಾಸ ಪೂಜಾರಿಯವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಕ್ಷೇತ್ರದ ಧರ್ಮಾಧಿಕಾರಿಗಳಾದ ಡಿ.ವಿರೇಂದ್ರ ಹೆಗ್ಗಡೆಯವರನ್ನು ಬೇಟಿಯಾಗಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಅಂಗಾರ, ಸುದರ್ಶನ್ ಮೂಡಬಿದ್ರೆ,ಬಿಜೆಪಿ ಜಿಲ್ಲಾಧ್ಯಕ್ಷರು, ಹರಿಕೃಷ್ಣ ಬಂಟ್ವಾಳ,ಕಿಯೋನಿಕ್ಸ್ ಸಂಸ್ಥೆಯ ಅಧ್ಯಕ್ಷ, ಪ್ರತಾಪ್ ಸಿಂಹ ನಾಯಕ್, ಶಾಸಕರು ವಿಧಾನಪರಿಷತ್, ಸಂತೋಷ್ ಕುಮಾರ್ ರೈ ಬೊಳಿಯಾರು,ಅಧ್ಯಕ್ಷರು ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್, ರಾಜೇಶ್ ಪೂಜಾರಿ ಜಿಲ್ಲಾ ಬಿಜೆಪಿ ಪ್ರಭಾರಿ, ಸುಧೀರ್ ಶೆಟ್ಟಿ ಕಣ್ಣೂರು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ರಾಮದಾಸ್ ಬಂಟ್ವಾಳ,ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಜಯಂತ್ ಕೋಟ್ಯಾನ್ ಬಿಜೆಪಿ ಮಂಡಲ ಅಧ್ಯಕ್ಷರು ಹಾಗೂ ಜಿಲ್ಲೆಯ ಮತ್ತು ಮಂಡಲ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!