ವಿಧಾನಪರಿಷತ್ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಕಡಬಕ್ಕೆ ಭೇಟಿ

ವಿಧಾನಪರಿಷತ್ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಕಡಬಕ್ಕೆ ಭೇಟಿ

ನೇಸರ ಡಿ2: ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ನನ್ನನ್ನು ಅಧಿಕ ಮತಗಳಿಂದ ಗೆಲ್ಲಿಸಬೇಕೆಂದರು , ಸುಳ್ಯ ವಿಧಾನಸಭಾ ಕ್ಷೇತ್ರವನ್ನು ದತ್ತು ಪಡೆದು ಪಕ್ಷ ಸಂಘಟನೆ ಬಲಪಡಿಸುತ್ತೇನೆ, ಎಂದು ವಿಧಾನಪರಿಷತ್ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಹೇಳಿದರು.
ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ಸಭಾಭವನದಲ್ಲಿ ನಡೆದ ಕಾರ್ಯಕರ್ತರನ್ನು ಹಾಗೂ ಗ್ರಾ.ಪಂ.ಸದಸ್ಯರನ್ನು ಭೇಟಿ ಮಾಡಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿನ ಅಂತರ ಹೆಚ್ಚಾಗುತ್ತಿದೆ, ಯುವ ಶಕ್ತಿಯನ್ನು ತನ್ನತ್ತ ಸೆಳೆಯುವ ಕೆಲಸವನ್ನು ಮಾಡಬೇಕಿದೆ, ನಮಗೆ ಅಧಿಕಾರದ ಆಸೆ ಇಲ್ಲ, ಅಧಿಕಾರ ಯಾರು ಬೇಕಾದರೆ ಪಡೆಯಲಿ ನಮ್ಮ ಪಕ್ಷ ಸಂಘಟನೆಯಾಗಬೇಕು, ಅದು ಬಲಗೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಸದಸ್ಯ ಡಾ|ರಘು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿದರು. ಸಭೆಯಲ್ಲಿ ಕಾಂಗ್ರೆಸ್ ಮುಖಂಡರು ಪಾಲ್ಗೊಂಡಿದ್ದರು.

Previous post

ನೆಲ್ಯಾಡಿ ಶಾಸ್ತಾರ ಫ್ರೆಂಡ್ಸ್ ಕುತ್ರಾಡಿ-ಹಾರ್ಪಳ : “ಕೆಸರ್ ಡೊಂಜಿ ಗೌಜಿ” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Next post

“ಕೆಸರ್ ಡೊಂಜಿ ಗೌಜಿ” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ : ನೆಲ್ಯಾಡಿ ಶಾಸ್ತಾರ ಫ್ರೆಂಡ್ಸ್ ಕುತ್ರಾಡಿ-ಹಾರ್ಪಳ

Leave a Reply

You May Have Missed

error: Content is protected !!