ಚಾರ್ಮಾಡಿ: ಲಾರಿ ಹಾಗೂ ಬಸ್ ನಡುವೆ ಅಪಘಾತ; ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

ಚಾರ್ಮಾಡಿ: ಲಾರಿ ಹಾಗೂ ಬಸ್ ನಡುವೆ ಅಪಘಾತ; ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

ನೇಸರ ಸೆ.11: ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ಗುಡಿಯ ಸಮೀಪ ಲಾರಿ ಹಾಗೂ ಬಸ್ ನಡುವೆ ಭಾನುವಾರ ಅಪಘಾತ ಸಂಭವಿಸಿ ಬಸ್ ಚರಂಡಿಗೆ ಉರುಳಿ ಬಿದ್ದು, ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಇದರಿಂದ ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಸುಮಾರು 2 ಗಂಟೆಗಳಷ್ಟು ಕಾಲ ಟ್ರಾಫಿಕ್ ಜಾಮ್ ಆಗಿ ವಾಹನಗಳು ಸಾಲುಗಟ್ಟಿ ನಿಂತು ಪ್ರಯಾಣಕರು ಪರದಾಡುವಂತಾಯಿತು. ಭಾನುವಾರವಾದ ಕಾರಣ ಹೆಚ್ಚಿನ ವಾಹನದಟ್ಟಣೆಯು ಇತ್ತು. ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಭಾರಿ ಮಳೆ ಹಾಗೂ ಮಬ್ಬು ಕವಿದ ವಾತಾವರಣವಿದ್ದು, ಆಗಾಗ ಅಪಘಾತಗಳು ಸಂಭವಿಸುತ್ತಿವೆ.
ಸ್ಥಳಕ್ಕೆ ಮೂಡಿಗೆರೆ ಪೊಲೀಸರು ಹಾಗೂ ಸ್ಥಳೀಯರು ಆಗಮಿಸಿ, ಸುಗಮ ವಾಹನ ಸಂಚಾರಕ್ಕೆ ಅನುಕೂಲ ಕಲ್ಪಿಸಿದರು.

Leave a Reply

You May Have Missed

error: Content is protected !!