ಬೆಳ್ತಂಗಡಿ: ಕಾನೂನು ಅರಿವು ಕಾರ್ಯಕ್ರಮ

ಬೆಳ್ತಂಗಡಿ: ಕಾನೂನು ಅರಿವು ಕಾರ್ಯಕ್ರಮ

ನೇಸರ ಸೆ.13: ಬೆಳ್ತಂಗಡಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಬೆಳ್ತಂಗಡಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವುಗಳ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ಹಾಗೂ ಪೋಷಣ್ ಅಭಿಯಾನ ಸಿಡಿಪಿಒ ಕಚೇರಿಯಲ್ಲಿ ಸೆ.13ರಂದು ಜರಗಿತು.

ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಸಂದೇಶ ಕೆ. ಕಾರ್ಯಕ್ರಮ ಉದ್ಘಾಟಿಸಿದರು. ಸಿಡಿಪಿಒ ಪ್ರಿಯಾ ಆಗ್ನೆಸ್ ಅಧ್ಯಕ್ಷತೆ ವಹಿಸಿದ್ದರು. ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ವಿಜಯೇಂದ್ರ ಟಿ.ಎಚ್. ವಕೀಲರ ಸಂಘದ ಕಾರ್ಯದರ್ಶಿ ಶೈಲೇಶ್ ಆರ್.ಠೋಸರ್, ಸಹಾಯಕ ಸರಕಾರಿ ಅಭಿಯೋಜಕ ದಿವ್ಯರಾಜ್ ಮತ್ತಿತರರು ಉಪಸ್ಥಿತರಿದ್ದರು. ವಕೀಲರ ಸಂಘದ ಆರ್.ಸುಭಾಷಿಣಿ ಪೌಷ್ಟಿಕಾಂಶ ದಿನದ ಕುರಿತು ಮಾಹಿತಿ ನೀಡಿದರು.

Leave a Reply

You May Have Missed

error: Content is protected !!