ಉಜಿರೆ ಶ್ರೀ ಸಿದ್ದವನ ಗುರುಕುಲದಲ್ಲಿ ಜಿಲ್ಲಾ ಮಟ್ಟದ ಶೈಕ್ಷಣಿಕ ಸಮಾವೇಶ 2022-23

ಉಜಿರೆ ಶ್ರೀ ಸಿದ್ದವನ ಗುರುಕುಲದಲ್ಲಿ ಜಿಲ್ಲಾ ಮಟ್ಟದ ಶೈಕ್ಷಣಿಕ ಸಮಾವೇಶ 2022-23

ನೇಸರ ಸೆ.14: ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ ಮತ್ತು ಉಜಿರೆಯ ಶ್ರೀ ಧ.ಮಂ.ಪದವಿಪೂರ್ವ ಕಾಲೇಜು ಜಂಟಿ ಸಹಭಾಗಿತ್ವದಲ್ಲಿ ಜಿಲ್ಲಾ ಮಟ್ಟದ ಶೈಕ್ಷಣಿಕ ಸಮಾವೇಶ 2022-23 ವನ್ನು ಉಜಿರೆ ಶ್ರೀ ಸಿದ್ದವನ ಗುರುಕುಲದಲ್ಲಿ ಸೆ.16 ರಂದು ಬೆಳಿಗ್ಗೆ9.45ಕ್ಕೆ ರಾಜ್ಯಸಭಾ ಸದಸ್ಯ, ಧರ್ಮಾಧಿಕಾರಿ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಲಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗು ಸಕಾಲ ಇಲಾಖಾ ಸಚಿವ ಬಿ.ಸಿ.ನಾಗೇಶ್ ಸೇವಾ ನಿವೃತ್ತ ಪ್ರಾಚಾರ್ಯರನ್ನು ಸನ್ಮಾನಿಸಲಿರುವರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಮೂಡಬಿದ್ರಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ, ಜಿಲ್ಲಾ ಪ.ಪೂ.ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಡಿ.ಜಯಣ್ಣ ಮತ್ತು ಉಜಿರೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಎಸ್ .ಸತೀಶ್ಚಂದ್ರ ಭಾಗವಹಿಸಲಿದ್ದಾರೆ.

Leave a Reply

You May Have Missed

error: Content is protected !!