ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅನ್ವಿತ್.ಎನ್ ವಿಭಾಗೀಯ ಮಟ್ಟಕ್ಕೆ ಆಯ್ಕೆ

ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅನ್ವಿತ್.ಎನ್ ವಿಭಾಗೀಯ ಮಟ್ಟಕ್ಕೆ ಆಯ್ಕೆ

ನೇಸರ ಸೆ.17: ಕರ್ನಾಟಕ ರಾಜ್ಯ ಸರಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಡಯಟ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ 2022ನೇ ಸಾಲಿನ ಜಿಲ್ಲಾ ಮಟ್ಟದ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯು ಸೆ.16ರಂದು ನಡೆಯಿತು.
ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅನ್ವಿತ್ ಎನ್, 10ನೇ ತರಗತಿ(ಶ್ರೀಪತಿ ಎನ್ ಮತ್ತು ವಿದ್ಯಾಲಕ್ಷ್ಮೀ.ಎ ದಂಪತಿ ಪುತ್ರ) ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಎಂದು ಶಾಲಾ ಮುಖ್ಯೋಪಾಧ್ಯಾಯರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

You May Have Missed

error: Content is protected !!