ದ.ಕ.ಖಾಲಿಯಿರುವ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಹುದ್ದೆಗೆ ನೇಮಕಾತಿಗೆ ಸಂಸದ ನಳಿನ್ ಸೂಚನೆ

ದ.ಕ.ಖಾಲಿಯಿರುವ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಹುದ್ದೆಗೆ ನೇಮಕಾತಿಗೆ ಸಂಸದ ನಳಿನ್ ಸೂಚನೆ

ಸವಣೂರು: ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ಖಾಲಿಯಿರುವ 144 ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ (ಎ.ಎನ್.ಎಂ.) ಹುದ್ದೆಗೆ ನೇಮಕಾತಿ ನಡೆಸುವಂತೆ ದ.ಕ.ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಆರೋಗ್ಯ ಸಚಿವ ಡಾ.ಸುಧಾಕರ ಅವರಿಗೆ ಸೂಚನೆ ನೀಡಿದರು.
ಅವರು ಶನಿವಾರ ತನ್ನ ಹುಟ್ಟೂರು ಪಾಲ್ತಾಡಿಯ ಕುಂಜಾಡಿಯಲ್ಲಿ ಎ.ಎನ್.ಎಂ. ತರಬೇತಿ ಪಡೆದು ಕೋವಿಡ್ ವಾರಿಯರ್ಸ್ ಆಗಿ ಕರ್ತವ್ಯ ನಿರ್ವಹಿಸಿದ್ದ ಅಭ್ಯರ್ಥಿಗಳಿಂದ ಮನವಿ ಸ್ವೀಕರಿಸಿದ ಬಳಿಕ ಜಿಲ್ಲಾ ಆರೋಗ್ಯಾಧಿಕಾರಿಯವರಿಂದ ಮಾಹಿತಿ ಪಡೆದು ಆರೋಗ್ಯ ಸಚಿವ ಡಾ.ಸುಧಾಕರ ಅವರ ಜತೆ ದೂರವಾಣಿಯಲ್ಲಿ ಮಾತನಾಡಿದರು.
ನಳಿನ್ ಕುಮಾರ್ ಅವರ ಕೋರಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಆರೋಗ್ಯ ಸಚಿವ ಡಾ.ಸುಧಾಕರ್ ಕೂಡಲೇ ನೇಮಕಾತಿ ಕುರಿತಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.

Previous post

ನೆಲ್ಯಾಡಿ ಕ್ಲಷ್ಟರ್ ಮಟ್ಟದ ಪ್ರತಿಭಾ ಕಾರಂಜಿ ; ಉದನೆಯ ಬಿಷಪ್ ಪಬ್ಲಿಕ್ ಸ್ಕೂಲ್ ಗೆ ಪ್ರಥಮ ಸಮಗ್ರ ಪ್ರಶಸ್ತಿ

Next post

ರಾಜ್ಯದಲ್ಲಿ ಸೆ.30ರಿಂದ ಭಾರತ್ ಜೋಡೋ; ದ.ಕ ಜಿಲ್ಲೆಯಿಂದ ಗುಂಡ್ಲುಪೇಟೆಗೆ ಹತ್ತು ಸಾವಿರ ಜನ – ಟಿ.ಎಂ.ಶಹೀದ್

Leave a Reply

You May Have Missed

error: Content is protected !!