ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಆಚರಣೆ

ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಆಚರಣೆ

ಕೊಕ್ಕಡ: ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ವನ್ನು ಅಕ್ಟೋಬರ್ ೨ ರಂದು ಸರಕಾರಿ ಪ್ರೌಢಶಾಲೆ ಕೊಕ್ಕಡ ಇಲ್ಲಿ ಬಹಳ ಸಂಭ್ರಮವಾಗಿ ಆಚರಣೆ ಮಾಡಲಾಯಿತು.
ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರ ಗಳಿಗೆ ಹೂ ಗಳಿಂದ ಅಲಂಕರಿಸಿ, ಹೂಮಾಲೆಯನ್ನು ಹಾಕುವುದರ ಮೂಲಕ ಶ್ರೇಷ್ಠ ವ್ಯಕ್ತಿಗಳಿಗೆ ನಮನವನ್ನು ಸಲ್ಲಿಸಲಾಯಿತು. ಅಲ್ಲದೆ ಗಾಂಧಿಯವರ ಅಚ್ಚುಮೆಚ್ಚಿನ “ರಘು ಪತಿ ರಾಘವ ರಾಜ ರಾಮ್” ಎಂಬ ಹಾಡನ್ನು ಎಲ್ಲ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಹಾಡಿದರು. ಈ ಮಹಾನ್ ವ್ಯಕ್ತಿ ಗಳು ನಮ್ಮ ದೇಶ ಭಾರತಕ್ಕೆ ಮಾಡಿದ ಸೇವೆ, ತ್ಯಾಗ, ಬಲಿದಾನವನ್ನು ಸ್ಮರಿಸಲಾಯಿತು. ವಿದ್ಯಾರ್ಥಿಗಳು ಕೂಡ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರಿಪಿಸಲಾಯಿತು.
ಈ ಸಂದರ್ಭದಲ್ಲಿ ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!