ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ದೇವೇಗೌಡರ ನಿವಾಸಕ್ಕೆ ಭೇಟಿ

ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ದೇವೇಗೌಡರ ನಿವಾಸಕ್ಕೆ ಭೇಟಿ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ನಿವಾಸಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಮತ್ತು ಸುರೇಂದ್ರ ಕುಮಾರ್ ಅವರು ಭೇಟಿ ನೀಡಿ ದೇವೇಗೌಡರ ಯೋಗಕ್ಷೇಮ ವಿಚಾರಿಸಿದರು.
ಪದ್ಮನಾಭ ನಗರ ನಿವಾಸಕ್ಕೆ ಬುಧವಾರ ಆಗಮಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಮತ್ತು ಉಪಾಧ್ಯಕ್ಷ ಸುರೇಂದ್ರ ಕುಮಾರ್ ಅವರು ಕೆಲ ಕಾಲ ದೇವೇಗೌಡರ ಜತೆ ಮಾತುಕತೆ ನಡೆಸಿದರು. ಶೀಘ್ರವೇ ಸಂಪೂರ್ಣ ಗುಣಮುಖರಾಗಲೆಂದು ಹಾರೈಸಿದರು.
ಮಂಡಿನೋವಿನಿಂದ ಬಳಲುತ್ತಿರುವ ದೇವೇಗೌಡರು ಕೆಲ ದಿನಗಳಿಂದ ಯಾವುದೇ ಸಭೆ-ಸಮಾರಂಭಗಳಿಗೂ ಹಾಜರಾಗುತ್ತಿರಲಿಲ್ಲ. ಅವರ ಆರೋಗ್ಯದಲ್ಲಿ ಚೇರಿಕೆ ಕಂಡುಬಂದಿ
ದೆ.

Leave a Reply

You May Have Missed

error: Content is protected !!