ಅ.20 ರಂದು ಆಲಂಕಾರು ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಬಿ ಎಂ ಎಸ್ ಸದಸ್ಯತ್ವ ಮತ್ತು ಅಬಾ ಕಾರ್ಡು ನೋಂದಾಣಿ ಅಭಿಯಾನ

ಅ.20 ರಂದು ಆಲಂಕಾರು ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಬಿ ಎಂ ಎಸ್ ಸದಸ್ಯತ್ವ ಮತ್ತು ಅಬಾ ಕಾರ್ಡು ನೋಂದಾಣಿ ಅಭಿಯಾನ

ಕಡಬ: ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದ ಕಡಬ ತಾಲೂಕು ಮಜ್ದೂರು ಸಂಘದ ಅಶ್ರಯದಲ್ಲಿ ಕೊಯಿಲ, ರಾಮಕುಂಜ, ಹಳೆನೇರೆಂಕಿ, ಕುಂತೂರು, ಪೆರಾಬೆ,ಬಲ್ಯ ಗ್ರಾಮಗಳನ್ನು ಒಳಗೊಂಡ ಆಲಂಕಾರು ವಲಯದ ಮಜ್ದೂರು ಸಂಘದ ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರ ಮಾಹಿತಿ ಕಾರ್ಯಗಾರ ಮತ್ತು ಬಿ ಎಂ ಎಸ್ ಸದಸ್ಯತ್ವ , ಅಬಾ ಕಾರ್ಡು ನೋಂದಾಣಿ ಅಭಿಯಾನ ಕಾರ್ಯಕ್ರಮ ಅಕ್ಟೋಬರ್.20 ರಂದು ಆಲಂಕಾರು ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಲಿದೆ. ಬೆಳಿಗ್ಗೆ 9.30ಕ್ಕೆ ಆರಂಭಗೊಳ್ಳಲಿರುವ ಕಾರ್ಯಕ್ರಮವನ್ನು ಸಚಿವ ಎಸ್ ಅಂಗಾರ ಉದ್ಘಾಟಿಸಲಿದ್ದಾರೆ.
ಮಜ್ದೂರು ಸಂಘದ ಕಡಬ ತಾಲೂಕು ಅಧ್ಯಕ್ಷ ತು.ಚಂದ್ರಶೇಖರ ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ಶಾಸಕ ಸಂಜೀವ ಮಠಂದೂರು, ಮಜ್ದೂರು ಸಂಘದ ರಾಜ್ಯ ಕಾರ್ಯದರ್ಶಿ ಜಯರಾಜ್, ದ.ಕ ಜಿಲ್ಲಾ ಅಧ್ಯಕ್ಷ ಅನಿಲ್ ದಡ್ಡು, ಸಂಘಟನಾ ಕಾರ್ಯದರ್ಶಿ ಕುಮಾರನಾಥ ಉಜಿರೆ, ಆಲಂಕಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸದಾನಂದ ಆಚಾರ್ಯ, ಆಲಂಕಾರು ಸಿ ಎ ಬ್ಯಾಂಕ್ ಆಡಳಿತ ಮಂಡಳಿ ಅಧ್ಯಕ್ಷ ಧರ್ಮಪಾಲ ರಾವ್ ಕಜೆ, ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಆಧ್ಯಕ್ಷ ದಾಮೋದರ ಕಕ್ವೆ, ಆಲಂಕಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ರಾಮಣ್ಣ ಗೌಡ ಸುರುಳಿ, ಆಲಂಕಾರು ಕೋಟಿ ಚೆನ್ನಯ್ಯ ಮಿತ್ರವೃಂದ ದ ಅಧ್ಯಕ್ಷ ಜಯಂತ ಪೂಜಾರಿ ನೆಕ್ಕಿಲಾಡಿ ಅತಿಥಿಗಳಾಗಿರುವರು ಎಂದು ಪ್ರಕಟಣೆ ತಿಳಿಸಿದೆ.

Leave a Reply

You May Have Missed

error: Content is protected !!