ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮುಂಡಾಜೆಯ ಅವನಿ ಹೆಬ್ಬಾರ್ ಗೆ ಪ್ರತಿಭಾ ಪುರಸ್ಕಾರ-2022

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮುಂಡಾಜೆಯ ಅವನಿ ಹೆಬ್ಬಾರ್ ಗೆ ಪ್ರತಿಭಾ ಪುರಸ್ಕಾರ-2022

ಉಜಿರೆ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ವತಿಯಿಂದ ಕೊಡಮಾಡುವ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಪ್ರತಿಭಾ ಪುರಸ್ಕಾರ-2022 ರಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯುತ್ತಮ ಸಾಧನೆಗೆ ಮುಂಡಾಜೆಯ ಅವನಿ ಹೆಬ್ಬಾರ್ ಅವರು ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇತ್ತೀಚೆಗೆ ಪುರಸ್ಕಾರ ಸ್ವೀಕರಿಸಿದರು. ಈ ವೇಳೆ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ಅಧ್ಯಕ್ಷೆ ತಾರಾ ಅನುರಾಧ,ಕರ್ನಾಟಕ ಗಡಿನಾಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ.ಸಿ.ಸೋಮಶೇಖರ್
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸಹಿತ ಗಣ್ಯರು ಉಪಸ್ಥಿತರಿದ್ದರು. ಅವನಿ ಹೆಬ್ಬಾರ್ ಅವರು ಪತ್ರಕರ್ತ ಅರವಿಂದ ಹೆಬ್ಬಾರ್ ಹಾಗೂ ಮುಂಡಾಜೆ ಗ್ರಾ.ಪಂ.ಮಾಜಿ ಸದಸ್ಯೆ ಅಶ್ವಿನಿ ಹೆಬ್ಬಾರ್ ಅವರ ಪುತ್ರಿ.
ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹಳೆ ವಿದ್ಯಾರ್ಥಿನಿಯಾಗಿದ್ದು, ಪ್ರಸ್ತುತ ಉಜಿರೆಯ ಎಸ್.ಡಿ.ಎಂ. ಪ.ಪೂ. ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.

Leave a Reply

You May Have Missed

error: Content is protected !!