ಭರ್ಜರಿ ಗುಡ್ ನ್ಯೂಸ್: 15 ಸಾವಿರ ಶಿಕ್ಷಕರ ಭರ್ತಿಗೆ ಆರ್ಥಿಕ ಇಲಾಖೆ ಒಪ್ಪಿಗೆ

ನೇಸರ ಡಿ12: ಕರ್ನಾಟಕ ರಾಜ್ಯ ಸರ್ಕಾರವು ಶೀಘ್ರದಲ್ಲೇ 15 ಸಾವಿರ ಶಿಕ್ಷಕರನ್ನು ರಾಜ್ಯದ ಭರ್ತಿ ಮಾಡಲು ನಿರ್ಧರಿಸಿದೆ. ಈ ಕುರಿತು ಅಧಿಕೃತ ಪ್ರಕಟಣೆ ಹೊರಬಿದ್ದಿದೆ. ಇದಕ್ಕೆ ಆರ್ಥಿಕ ಇಲಾಖೆಯು ಒಪ್ಪಿಗೆ ನೀಡಿದೆ.
ಕಳೆದ ನವೆಂಬರ್ ಮೊದಲ ವಾರದಲ್ಲಿ ಕೇವಲ 5 ಸಾವಿರ ಶಿಕ್ಷಕರ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿತ್ತು. ನಂತರದಲ್ಲಿ ರಾಜ್ಯದಲ್ಲಿ ಶಿಕ್ಷಕರ ಕೊರತೆ, ಶಿಕ್ಷಣದ ಗುಣಮಟ್ಟ ಕಾಪಾಡುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಮನವಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಇನ್ನೂ 10 ಸಾವಿರ ಶಿಕ್ಷಕರ ನೇಮಕಾತಿಗೆ ಅನುಮತಿ ನೀಡಿದೆ. ಈ ಮೂಲಕ ರಾಜ್ಯದಲ್ಲಿ ಬಿಎ ಬಿ.ಇಡಿ, D.Ed ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ.
ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಪದವೀಧರ ಪ್ರಾಥಮಿಕ ಶಾಲಾ (6 ರಿಂದ 8) ಶಿಕ್ಷಕರ 10,000 ಹುದ್ದೆಗಳ ಭರ್ತಿ. ಹಾಗೂ ಕಲ್ಯಾಣ ಕರ್ನಾಟಕ ವೃಂದದ ಪದವೀಧರ ಪ್ರಾಥಮಿಕ ಶಾಲಾ (6 ರಿಂದ 8) ಶಿಕ್ಷಕರ 5,000 ಹುದ್ದೆಗಳ ಭರ್ತಿ ಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಒಟ್ಟು 15 ಸಾವಿರ ಶಿಕ್ಷಕ ಹುದ್ದೆಗಳ ಭರ್ತಿಗೂ ಆರ್ಥಿಕ ಇಲಾಖೆ ಅನುಮೋದನೆ ನೀಡಿರುವ ಕಾರಣ ಯಾವುದೇ ಸಮಯದಲ್ಲಿ ಬೇಕಾದರೂ ಅಧಿಕೃತ ನೋಟಿಫಿಕೇಶನ್ ಬಿಡುಗಡೆ ಆಗಲಿದೆ.
ಶಿಕ್ಷಕರ ಕೊರತೆ ನೀಗಿಸಿ ಶಿಕ್ಷಣದ ಗುಣಮಟ್ಟ ಕಾಪಾಡಲು ಈಗಾಗಲೇ 23 ಸಾವಿರ ಅತಿಥಿ ಶಿಕ್ಷಕರ ಸೇವೆಯನ್ನು ಪಡೆಯಲಾಗಿದೆ. ಈಗ 15 ಸಾವಿರ ಶಿಕ್ಷಕರ ನೇರ ನೇಮಕಾತಿ ಜತೆಗೆ 4 ಸಾವಿರ ಅತಿಥಿ ಶಿಕ್ಷಕರ ಸೇವೆಯನ್ನು ಪಡೆಯಲು ಸರ್ಕಾರ ನಿರ್ಧರಿಸಿದೆ.














Leave a Reply