ಶಿಶಿಲ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಶಿಶಿಲ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ನೇಸರ ಡಿ.13: ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಪೇರಿಕೆಯ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಲಕ್ಷ್ಮೀಶ(16.ವ) ಎಂಬವರು ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.12 ರಂದು ನಡೆದಿದೆ.
ಶಿಶಿಲ ಗ್ರಾಮದ ಪೇರಿಕೆ ನಿವಾಸಿ, ಲಿಂಗಪ್ಪ ಗೌಡ ರವರ ಪುತ್ರ ಲಕ್ಷ್ಮೀಶ ರವರು ಸರಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಡಿ.12 ರಂದು ಭಾನುವಾರ ರಜಾದಿನವಾದ ಕಾರಣ ವಿದ್ಯಾರ್ಥಿ ಮನೆಯಲ್ಲಿಯೇ ಇದ್ದರು. ಕೆಲಸಕ್ಕೆಂದು ಹೋಗಿದ್ದ ಈತನ ತಾಯಿ ಮಧ್ಯಾಹ್ನ ಮನೆಗೆ ಬಂದು ಬಳಿಕ ಮತ್ತೆ ಕೆಲಸದ ಸ್ಥಳಕ್ಕೆ ತೆರಳಿದ್ದರು. ಸಂಜೆ ಮನೆಗೆ ಬಂದು ನೋಡಿದ ವೇಳೆ ಬಾಲಕ ಮನೆಯ ಪಕ್ಕಾಸಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಕೃತ್ಯ ಬೆಳಕಿಗೆ ಬಂದಿದೆ.
ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Previous post

ನೆಲ್ಯಾಡಿ ರಾಮನಗರ ನಾವಲ್ಲಿ ಶ್ರೀನಾಗದೇವರು, ಅಮೆತ್ತಿಮಾರುಗುತ್ತು ಶ್ರೀರಕ್ತೇಶ್ವರಿ, ಪರಿವಾರ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮ

Next post

ಶ್ರೀ ಸೌತಡ್ಕ ಮಹಾಗಣಪತಿ ಸನ್ನಿಧಿಯಲ್ಲಿ ಕಾಶಿ ವಿಶ್ವನಾಥನ ಮಂದಿರ ಲೋಕಾರ್ಪಣೆಯ ನೇರ ಪ್ರಸಾರ ಕಾರ್ಯಕ್ರಮ

Leave a Reply

You May Have Missed

error: Content is protected !!