ನೆಲ್ಯಾಡಿ ಸಂತ ಜಾರ್ಜ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಬೆಲ್ಸಿಟಾ ಜಾಸ್ಮಿನ್ ರಾಜ್ಯಮಟ್ಟಕ್ಕೆ ಆಯ್ಕೆ

ನೆಲ್ಯಾಡಿ ಸಂತ ಜಾರ್ಜ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಬೆಲ್ಸಿಟಾ ಜಾಸ್ಮಿನ್ ರಾಜ್ಯಮಟ್ಟಕ್ಕೆ ಆಯ್ಕೆ

ನೆಲ್ಯಾಡಿ: ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಸಂತ ಜಾರ್ಜ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 8ನೆಯ ತರಗತಿ ವಿದ್ಯಾರ್ಥಿನಿ ಬೆಲ್ಸಿಟಾ ಜಾಸ್ಮಿನ್ ರವರು 14ರ ವಯೋಮಿತಿಯ ಬಾಲಕಿಯರ ವಿಭಾಗದ 100ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ವಿದ್ಯಾಸಂಸ್ಥೆಯ ಸಂಚಾಲಕರಾದ ಅಬ್ರಹಾಂ ವರ್ಗೀಸ್ ರವರು ತಿಳಿಸಿದ್ದಾರೆ.
ಇವರು ಆರ್ಲದ ವಿಲ್ಸೆಂಟ್ ಹಾಗೂ ಲಿಸ್ಸಿ ವಿಲ್ಸೆಂಟ್ ರವರ ಪುತ್ರಿಯಾಗಿದ್ದು, ದೈಹಿಕ ನಿರ್ದೇಶಕ ಮಹಮ್ಮದ್ ಹಾರೀಸ್ ರವರು ತರಬೇತಿ ನೀಡಿದ್ದಾರೆ. ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದದವರು ವಿದ್ಯಾರ್ಥಿಯ ಸಾಧನೆಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Leave a Reply

You May Have Missed

error: Content is protected !!