ಪುದುವೆಟ್ಟು ಗ್ರಾಮದಲ್ಲಿ ವಿಷ ಅಣಬೆ ಸೇವಿಸಿ ಒಂದೇ ಕುಟುಂಬದ ಇಬ್ಬರು ಸಾವು

ಪುದುವೆಟ್ಟು ಗ್ರಾಮದಲ್ಲಿ ವಿಷ ಅಣಬೆ ಸೇವಿಸಿ ಒಂದೇ ಕುಟುಂಬದ ಇಬ್ಬರು ಸಾವು

ಬೆಳ್ತಂಗಡಿ: ಕಾಡಿನ ವಿಷ ಪೂರಿತ ಅಣಬೆಯನ್ನು ಸೇವಿಸಿದ ಪರಿಣಾಮ ಒಂದೇ ಕುಟುಂಬದ ಇಬ್ಬರು ಅಸುನೀಗಿದ ಘಟನೆ ನ.22 ರಂದು ಬೆಳ್ತಂಗಡಿ ತಾಲೂಕಿನ ಪುದುವೆಟ್ಟುವಿನಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಮಿಯ್ಯಾರುಪಾದೆ ಕೇರಿಮಾರು ನಿವಾಸಿಗಳಾದ ಗುರುವ(75) ಹಾಗು ಮತ್ತು ಇವರ ಪುತ್ರ ಓಡಿ(45) ಮೃತ ದುರ್ದೈವಿಗಳು.
ತೀರ ಬಡ ಕುಟುಂಬದ ಮನೆಯಲ್ಲಿ ಗುರುವ ಸಹಿತ ಇಬ್ಬರು ಮಕ್ಕಳು ವಾಸವಾಗಿದ್ದರು. ಮಂಗಳವಾರ ಇವರ ಇಬ್ಬರ ಮೃತದೇಹ‌ ಮನೆ ಮುಂಭಾಗ ಬಿದ್ದಿರುವುದನ್ನು ಸ್ಥಳೀಯರು ಕಂಡು ಆತಂಕಕ್ಕೀಡಾಗಿದ್ದರು. ಪರಿಶೀಲಿಸಿದಾಗ ಸೋಮವಾರ ರಾತ್ರಿ ಕಾಡಿನ ಯಾವುದೋ ವಿಷಪೂರಿತ ಅಣಬೆಯನ್ನು ಅಡುಗೆ ಮಾಡಿ ಸೇವಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.
ಇದರಿಂದ ಅನಾಹುತ ಸಂಭವಿಸಿದೆ. ಮತ್ತೋರ್ವ ಮಗ ಮನೆಯಲ್ಲಿ ಇಲ್ಲದ್ದರಿಂದ ಮತ್ತೊಂದು ಅವಘಡ ತಪ್ಪಿದೆ.
ಘಟನೆ ವಿಚಾರ ತಿಳಿದು ಸ್ಥಳೀಯ ಜನಪ್ರತಿನಿಧಿಗಳು, ಸಾರ್ವಜನಿಕರು ಜಮಾಯಿಸಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಠಾಣಾಧಿಕಾರಿಗಳು ಭೇಟಿ ನೀಡಿದ್ದು. ತನಿಖೆ ಬಳಿಕ ಸ್ಪಷ್ಟ ಮಾಹಿತಿ ತಿಳಿದು ಬರಬೇಕಿದೆ.

Leave a Reply

You May Have Missed

error: Content is protected !!