ಕೇಂದ್ರ ಸಚಿವೆ ಸ್ಮೃತಿ ಇರಾನಿ ಧರ್ಮಸ್ಥಳಕ್ಕೆ ಭೇಟಿ

ಕೇಂದ್ರ ಸಚಿವೆ ಸ್ಮೃತಿ ಇರಾನಿ ಧರ್ಮಸ್ಥಳಕ್ಕೆ ಭೇಟಿ

ಬೆಳ್ತಂಗಡಿ : ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಮಂಗಳವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದರು.
ಧರ್ಮಸ್ಥಳದಲ್ಲಿ ನಡೆಯುತ್ತಿರುವ ಲಕ್ಷದೀಪೋತ್ಸವ ಪ್ರಯುಕ್ತ ನ.22 ರ ಸರ್ವಧರ್ಮ 90 ನೇ ಅಧಿವೇಶನ ಉದ್ಘಾಟನೆ ನೆರವೇರಿಸಲಿರುವ ಅವರು ದೆಹಲಿಯಿಂದ ನೇರವಾಗಿ ಮಂಗಳೂರು ವಿಮಾನ ನಿಲ್ದಾಣ ಬಂದಿಳಿದು ಬಳಿಕ ಮಾರ್ಗದ ಮೂಲಕ ಧರ್ಮಸ್ಥಳ ತಲುಪಿದರು.
ಈ ವೇಳೆ ಡಿ.ಸುರೇಂದ್ರ ಕುಮಾರ್, ಶ್ರದ್ಧಾ ಅಮಿತ್, ಡಿ.ಶ್ರೇಯಸ್ ಕುಮಾರ್, ನೀತಾ ರಾಜೇಂದ್ರ ಕುಮಾರ್ ಮತ್ತು ಎಂ.ಎಲ್.ಸಿ. ಕೆ.ಪ್ರತಾಪಸಿಂಹ ನಾಯಕ್ ಸ್ವಾಗತಿಸಿದರು.

Previous post

ಪುದುವೆಟ್ಟು ಗ್ರಾಮದಲ್ಲಿ ವಿಷ ಅಣಬೆ ಸೇವಿಸಿ ಒಂದೇ ಕುಟುಂಬದ ಇಬ್ಬರು ಸಾವು

Next post

ವಿದ್ಯಾಭಾರತಿ ಕ್ರೀಡಾಕೂಟದಲ್ಲಿ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಶ್ರೀವರ್ಣಾ. ಪಿ.ಡಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Leave a Reply

You May Have Missed

error: Content is protected !!