ಚಾರ್ಮಾಡಿ ಘಾಟಿ: ನೀರಿನ ಟ್ರ್ಯಾಕ್ಟರ್ ಪಲ್ಟಿ, ಓರ್ವ ಸಾವು

ಚಾರ್ಮಾಡಿ ಘಾಟಿ: ನೀರಿನ ಟ್ರ್ಯಾಕ್ಟರ್ ಪಲ್ಟಿ, ಓರ್ವ ಸಾವು

ಚಾರ್ಮಾಡಿ ಘಾಟಿಯ ಬಿದಿರುತಳ ಸಮೀಪ ನೀರು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೋರ್ವ ಕಾರ್ಮಿಕನಿಗೆ ಗಂಭೀರ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.

ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಘಾಟಿಯಲ್ಲಿ ನಡೆಯುತ್ತಿರುವ ಕಾಮಗಾರಿಗೆ ಟ್ರ್ಯಾಕ್ಟರ್ ಮೂಲಕ ನೀರು ತುಂಬಿಸಿಕೊಂಡು ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾ ಕ್ಟರ್ ಪಲ್ಟಿಯಾಗಿ ಅದರಲ್ಲಿದ್ದ ಜಾರ್ಖಂಡ್ ಮೂಲದ ಕಾರ್ಮಿಕ ದಿಬೋ ಶಂಕರ್ ನಾಯಕ್ (22)ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ ಕಾರ್ಮಿಕ ಗಂಭೀರ ಗಾಯಗೊಂಡಿದ್ದು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಿಂದ ಘಾಟಿಯಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಯು ಉಂಟಾಯಿತು.

Leave a Reply

You May Have Missed

error: Content is protected !!