ನೆಲ್ಯಾಡಿ: ಪಡುಬೆಟ್ಟು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಕ್ರೀಡಾಕೂಟ

ನೆಲ್ಯಾಡಿ: ಪಡುಬೆಟ್ಟು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಕ್ರೀಡಾಕೂಟ

ನೆಲ್ಯಾಡಿ: ಪಡುಬೆಟ್ಟು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಡಿ.31ರಂದು ನಡೆಯುವ ವಾರ್ಷಿಕೋತ್ಸವದ ಪ್ರಯುಕ್ತ ದಿನಾಂಕ 10.12.2022ನೇ ಶನಿವಾರದಂದು ಪಡುಬೆಟ್ಟು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಕ್ರೀಡಾಕೂಟವನ್ನು ಏರ್ಪಡಿಸಲಾಯಿತು.
ಕಾರ್ಯಕ್ರಮವನ್ನು ಮಾಯಿಲಪ್ಪ ಜಿ., ಪದವಿದರೇತರ ಮುಖ್ಯಗುರುಗಳು ಕೆ.ಪಿ.ಎಸ್. ಬೆಳ್ಳಾರೆ ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ವಾರ್ಷಿಕೋತ್ಸವ ಸಮಿತಿಯ ಅಧ್ಯಕ್ಷರಾದ ಶೀನಪ್ಪ ಗೌಡ ಬರೆಮೇಲು ಅಧ್ಯಕ್ಷ ಸ್ಥಾನವನ್ನು ವಹಿಸಿದ್ದರು. ವರ್ತಕರ ಸಂಘದ ಅಧ್ಯಕ್ಷರಾದ ರಫೀಕ್ ಸೀಗಲ್, ಶಿಲ್ಪಾ ಹಾರ್ಡ್‌ವೇರ್ ನ ಮಾಲಕರಾದ ಶಿವಣ್ಣ ಪಿ ಹೆಗ್ಡೆ, ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಕುಶಾಲಪ್ಪ ಜಿ , ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರವಿಚಂದ್ರ ಪಡುಬೆಟ್ಟು, ಶಾಲಾ ಮುಖ್ಯಗುರುಗಳಾದ ಶ್ರೀಮತಿ ಜೆಸ್ಸಿ ಕೆ.ಎ. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಬಳಿಕ ಹಳೆ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಹಾಗೂ ಸ್ಥಳೀಯರಿಗೆ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ನಿರೂಪಕ ಹಾಗೂ ಶಾಲೆಯ ಹಳೆ ವಿದ್ಯಾರ್ಥಿಯಾಗಿರುವ ಸುರೇಶ್ ಪಡಿಪಂಡ ಕಾರ್ಯಕ್ರಮವನ್ನು ನಿರೂಪಿಸಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶಿವಪ್ರಸಾದ್ ಬೀದಿಮಜಲು ವಂದಿಸಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿಯಾದ ಶ್ರೀಮತಿ ಲೀಲಾವತಿ ಎಂ.ಹಾಗೂ ಶಿಕ್ಷಕ ವೃಂದದವರು ಸಹಕರಿಸಿದರು.

Leave a Reply

You May Have Missed

error: Content is protected !!