ರಾಷ್ಟ್ರ ಮಟ್ಟದ ಮಾಜಿ ವೈಟ್ ಲಿಪ್ಟಿಂಗ್ ಆಟಗಾರ, ರಾಜೇಂದ್ರ ಪ್ರಸಾದ್ ಹೃದಯಾಘಾತದಿಂದ ನಿಧನ

ರಾಷ್ಟ್ರ ಮಟ್ಟದ ಮಾಜಿ ವೈಟ್ ಲಿಪ್ಟಿಂಗ್ ಆಟಗಾರ, ರಾಜೇಂದ್ರ ಪ್ರಸಾದ್ ಹೃದಯಾಘಾತದಿಂದ ನಿಧನ

ಪುತ್ತೂರು: ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ವೈಟ್ ಲಿಪ್ಟಿಂಗ್ ಕೋಚ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜೇಂದ್ರ ಪ್ರಸಾದ್(42ವ.) ರವರು ಹೃದಯಾಘಾತದಿಂದ ದ.12 ರಂದು ನಿಧನ ಹೊಂದಿದ್ದಾರೆ.
ಮೃತ ರಾಜೇಂದ್ರ ಪ್ರಸಾದ್ ರವರು ಪ್ರಸ್ತುತ ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ವೈಟ್ ಲಿಪ್ಟಿಂಗ್ ತರಬೇತುದಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಮುಖ್ಯ ಕೋಚ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ರಾಜೇಂದ್ರ ಪ್ರಸಾದ್ ರವರ ಆಯ್ಕೆಯಾಗಿರುತ್ತಾರೆ.
ಪುತ್ತೂರಿನ ಫಿಲೋಮಿನಾ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸಂದರ್ಭ ರಾಜೇಂದ್ರ ಪ್ರಸಾದ್ ರವರು ವೈಟ್ ಲಿಪ್ಟಿಂಗ್ ನಲ್ಲಿ ರಾಷ್ಟ್ರ ಮಟ್ಟದ ಆಟಗಾರನಾಗಿ ಗುರುತಿಸಿಕೊಂಡಿದ್ದರು.ಅಲ್ಲದೆ ಫಿಲೋಮಿನಾ ಕಾಲೇಜಿನಲ್ಲಿ ವೈಟ್ ಲಿಪ್ಟಿಂಗ್ ಕೋಚ್ ಆಗಿ ಹಲವು ವರ್ಷ ಕ್ರೀಡಾಪಟುಗಳಿಗೆ ತರಬೇತಿಯನ್ನು ನೀಡಿರುತ್ತಾರೆ.

ಏಕಲವ್ಯ ಪ್ರಶಸ್ತಿ ಪುರಸ್ಕೃತ, ಇಂಗ್ಲೆಂಡಿನ ಬರ್ಮಿಂಗ್ ಹ್ಯಾಂನಲ್ಲಿ ನಡೆದಿರುವ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ ಪಡೆದಿರುವ ಗುರುರಾಜ್ ಪೂಜಾರಿಯವರು ರಾಜೇಂದ್ರ ಪ್ರಸಾದ್ ರವರ ಶಿಷ್ಯರಾಗಿದ್ದರು.
ಮೃತ ರಾಜೇಂದ್ರ ಪ್ರಸಾದ್ ರವರು ತಂದೆ ರಾಮಕೃಷ್ಣ, ತಾಯಿ ಇಂದಿರಾವತಿ, ಪತ್ನಿ ಬಂಟ್ವಾಳ ಬಿಇಒ ಕಛೇರಿಯಲ್ಲಿ ಕ್ಲರ್ಕ್ ಆಗಿರುವ ಪ್ರತಿಮಾ, ಪುತ್ರಿಯರಾದ ಸಮನ್ವಿ, ಮಾನ್ವಿ ವರನ್ನು ಅಗಲಿದ್ದಾರೆ.

Leave a Reply

You May Have Missed

error: Content is protected !!