ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಸಂಸ್ಮರಣೆ

ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಸಂಸ್ಮರಣೆ

ರಾಮಕುಂಜ: ಇಲ್ಲಿನ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆ ಮತ್ತು ಪದವಿಪೂರ್ವ ವಿಭಾಗದಲ್ಲಿ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಸಂಸ್ಮರಣೆಯ ಕಾರ್ಯಕ್ರಮವು ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಚಂದ್ರಶೇಖರ.ಕೆ ಯವರು “ಪೂಜ್ಯ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ರಾಮಕುಂಜ ಎಂಬ ಪುಟ್ಟ ಹಳ್ಳಿಯಲ್ಲಿ ಹುಟ್ಟಿ ವಿಶ್ವವಿಖ್ಯಾತರಾದವರು. ಇವರ ಸಮಾಜಮುಖೀ ಕಾರ್ಯಗಳ ಫಲವಾಗಿಯೇ ಇಂದು ನಮ್ಮಂಥಹ ಅನೇಕ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಪೂಜ್ಯರ ಅನುಗ್ರಹದಿಂದಲೇ ಇವೆಲ್ಲವೂ ಸಾಧ್ಯವಾಗಿವೆ. ಕೃಷ್ಣೈಕ್ಯರಾದ ಶ್ರೀಗಳವರನ್ನು ಸದಾ ನಾವು ಸ್ಮರಿಸಬೇಕು, ಅವರ ವಿಚಾರಗಳನ್ನು ಅನುಷ್ಠಾನಕ್ಕೆ ತರಬೇಕು.” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಚಂದ್ರಶೇಖರ ಕೆ, ಪ್ರೌಢಶಾಲಾ ಮುಖ್ಯಸ್ಥರಾದ ಸತೀಶ್ ಭಟ್, ಅಧ್ಯಾಪಕ, ಅಧ್ಯಾಪಕೇತರವೃಂದದವರು, ವಿದ್ಯಾರ್ಥಿಗಳು ಸ್ವಾಮೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯಗೈದರು.

Leave a Reply

You May Have Missed

error: Content is protected !!