ವಿವೇಕಾನಂದ ವಿದ್ಯಾಸಂಸ್ಥೆಗಳು, ವಿವೇಕನಗರ, ತೆಂಕಿಲ; 74ನೇ ಗಣರಾಜ್ಯೋತ್ಸವ ಆಚರಣೆ

ವಿವೇಕಾನಂದ ವಿದ್ಯಾಸಂಸ್ಥೆಗಳು, ವಿವೇಕನಗರ, ತೆಂಕಿಲ; 74ನೇ ಗಣರಾಜ್ಯೋತ್ಸವ ಆಚರಣೆ

ಪುತ್ತೂರು: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ಮತ್ತು ಕನ್ನಡ ಮಾಧ್ಯಮ ಶಾಲೆ ವಿವೇಕಾನಂದ ಬಿ. ಎಡ್ ಕಾಲೇಜು, ನರೇಂದ್ರ ಪದವಿಪೂರ್ವ ಕಾಲೇಜು ವಿವೇಕನಗರ, ತೆಂಕಿಲ, ಪುತ್ತೂರು ಇವುಗಳ ಜಂಟಿ ಆಶ್ರಯದಲ್ಲಿ 74ನೇ ಗಣರಾಜ್ಯೋತ್ಸವವನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಕ್ರೀಡಾಂಗಣದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ನಮ್ಮ ದೇಶದ ನಿವೃತ್ತ ಸೈನಾಧಿಕಾರಿ ಹಾಗೂ ಪೋಷಕರಾದ ಕಿಶೋರ್ ಮಾವಜಿ ಅವರು ಗಣರಾಜ್ಯೋತ್ಸವದ ಧ್ವಜಾರೋಹಣಗೈದರು, ನಂತರ ಮಾತನಾಡಿದ ಅವರು ಮೂಲಭೂತ ಹಕ್ಕುಗಳ ಜೊತೆಗೆ ಮೂಲಭೂತ ಕರ್ತವ್ಯಗಳನ್ನು ಸೂಕ್ತವಾಗಿ ನಿರ್ವಹಿಸುವ ಅಗತ್ಯವಿದೆ. ಮಾತ್ರವಲ್ಲದೇ ಸಂವಿಧಾನದ ಗೌರವ ರಕ್ಷಣೆ ಮತ್ತು ದೇಶ ರಕ್ಷಣೆ ನಮ್ಮೆಲ್ಲರ ಆದ್ಯತೆಯಾಗಬೇಕು ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಖಜಾಂಚಿ ಅಚ್ಯುತ್ ನಾಯಕ್ ಸಂದರ್ಭೋಚಿತವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ನಾಲ್ಕೂ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು, ಸದಸ್ಯರು, ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳು, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು, ಬಿ.ಎಡ್ ವಿದ್ಯಾರ್ಥಿ ಶಿಕ್ಷಕರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ‘ವಂದೇ ಮಾತರಂ’ ಧ್ವಜಗೀತೆ ಮತ್ತು ರಾಷ್ಟ್ರಗೀತೆಯನ್ನು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹಾಡಿದರು. ಪ್ರೌಢ ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಕವಾಯತು ನಡೆಸಲಾಯಿತು. ಅತ್ಯಂತ ಅಚ್ಚುಕಟ್ಟಾಗಿ ನಡೆದ ಕಾರ್ಯಕ್ರಮವನ್ನು ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರು ನಿರ್ವಹಿಸಿದರು.
ವಿವೇಕಾನಂದ ಬಿ.ಎಡ್ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಡಾ. ಶೋಭಿತಾ ಸತೀಶ್ ಸ್ವಾಗತಿಸಿ, ನರೇಂದ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶಾನುಭೋಗ್ ವಂದಿಸಿದರು. ಶ್ರೀಮತಿ ಕೃತಿಕಾ ರೈ ಕಾರ್ಯಕ್ರಮ ನಿರೂಪಿಸಿದರು.

Leave a Reply

You May Have Missed

error: Content is protected !!