ಸಿಎ ಪರೀಕ್ಷೆಯಲ್ಲಿ ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತೇರ್ಗಡೆ

ಸಿಎ ಪರೀಕ್ಷೆಯಲ್ಲಿ ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತೇರ್ಗಡೆ

ರಾಮಕುಂಜ: ಐಸಿಎಐ ಕಳೆದ ಡಿಸೆಂಬರ್ ನಲ್ಲಿ ನಡೆಸಿದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ 2020-2022 ನೇ ಸಾಲಿನ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಅಧ್ಯಯನವನ್ನು ಮಾಡಿದ ವಿದ್ಯಾರ್ಥಿಗಳಾದ ಶ್ರೀರಕ್ಷಾ, ಶ್ರೇಯ ಸಿ.ಎಚ್, ಪಾರ್ಥ ಪಿ ಎಸ್, ಮುರುಳಿಧರ ವಿ ಮತ್ತು ಭರತ್ ಕುಮಾರ್ ಇವರು ಕಲಿಕೆಯಲ್ಲೂ ಅತ್ಯುನ್ನತ ಸಾಧನೆಯನ್ನ ಮಾಡಿದ್ದು ಕಾಲೇಜಿಗೆ ಕೀರ್ತಿಯನ್ನು ತಂದುಕೊಟ್ಟಿದ್ದಾರೆ.
ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆಯನ್ನ ಹೊಂದಿ ಮುಂದೆ ನಡೆಯಲು ಇರುವಂತಹ ಸಿಎ ಇಂಟರ್ಮೀಡಿಯೆಟ್ ಪರೀಕ್ಷೆಗೆ ಅರ್ಹರಾಗಿರುತ್ತಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ-ಅಧ್ಯಾಪಕೇತರ ವೃಂದದವರು ಅಭಿನಂದಿಸಿದ್ದಾರೆ.

Leave a Reply

You May Have Missed

error: Content is protected !!