ಕೊಕ್ಕಡದಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಬರಮೇಲು ವಿನಯ್ ಬಂಧನ

ಕೊಕ್ಕಡದಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಬರಮೇಲು ವಿನಯ್ ಬಂಧನ

ನೆಲ್ಯಾಡಿ: 2013ರಲ್ಲಿ ಕೊಕ್ಕಡದಲ್ಲಿ ನಡೆದ ಹಲ್ಲೆ ಪ್ರಕರಣವೊಂದರ ಆರೋಪಿಯಾಗಿದ್ದು ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಬರಮೇಲು ನಿವಾಸಿ ಸಿದ್ದಪ್ಪ ಗೌಡ ಎಂಬವರ ಪುತ್ರ ವಿನಯ್(29ವ.)ಎಂಬವರನ್ನು ಧರ್ಮಸ್ಥಳ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

2013ರಲ್ಲಿ ಕೊಕ್ಕಡದಲ್ಲಿ ನಡೆದಿದ್ದ ಹಲ್ಲೆ ಪ್ರಕರಣವೊಂದರಲ್ಲಿ ವಿನಯ್ ಭಾಗಿಯಾಗಿದ್ದು ಈತನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ 91/2013 ಕಲಂ:147.148.149.323.506.324 IPಅ ರಂತೆ ಪ್ರಕರಣ ದಾಖಲಾಗಿತ್ತು. ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಆದರೆ ವಿನಯ್ 4 ವರ್ಷದಿಂದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿತ್ತು. ಫೆ.9ರಂದು ಧರ್ಮಸ್ಥಳದಲ್ಲಿ ಆರೋಪಿಯನ್ನು ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸ್ ಠಾಣೆಯ ಹೆಚ್.ಸಿ.ರಾಜೇಶ್ ಮತ್ತು ಪಿ.ಸಿ ಮಲ್ಲಿಕಾರ್ಜುನ್‌ರವರು ಆರೋಪಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿ ವಿನಯ್ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕಳ್ಳತನ ಪ್ರಕರಣವೊಂದರಲ್ಲಿ ಮುಖ್ಯ ಆರೋಪಿಯಾಗಿರುತ್ತಾನೆ.

Leave a Reply

You May Have Missed

error: Content is protected !!