ಶಿಕ್ಷಕ ವೆಂಕಟೇಶ್ ಪ್ರಸಾದ್ ರಾಷ್ಟ್ರಮಟ್ಟಕ್ಕೆ ಆಯ್ಕೆ

ಶಿಕ್ಷಕ ವೆಂಕಟೇಶ್ ಪ್ರಸಾದ್ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ಕರ್ನಾಟಕ ಮಾಸ್ಟರ್ಸ್ ಆತ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಕೋಲಾರದ ಪೊಲೀಸ್ ಕವಾಯತು ಕ್ರೀಡಾಂಗಣದಲ್ಲಿ ಫೆಬ್ರವರಿ 11 ಮತ್ತು 12ರಂದು ನಡೆದ ರಾಜ್ಯ ಮಟ್ಟದ 41ನೇ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಂಸ್ಕೃತ ಶಿಕ್ಷಕ, ಪುತ್ತೂರು ತಾಲೂಕು, ದರ್ಬೆತ್ತಡ್ಕ ನಿವಾಸಿ ವೆಂಕಟೇಶ್ ಪ್ರಸಾದ್ ಇವರು 45ರ ವಯೋಮಾನ ವಿಭಾಗದ ಎತ್ತರ ಜಿಗಿತದಲ್ಲಿ ಪ್ರಥಮ ಮತ್ತು ಉದ್ದಜಿಗಿತದಲ್ಲಿ ತೃತೀಯ ಸ್ಥಾನ ಪಡೆದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮಾರ್ಚ್ 27ರಿಂದ 30ರವರೆಗೆ ನಡೆಯುವ ರಾಷ್ಟ ಮಟ್ಟದ ಹಿರಿಯರ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.

ಎಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

You May Have Missed

error: Content is protected !!