ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಕ್ರೀಡಾಕೂಟವು ಚಾಮುಂಡಿ ವಿಹಾರ ಸ್ಟೇಡಿಯಂ ಮೈಸೂರು ಇಲ್ಲಿ 19 ರಿಂದ22 ರ ವರೆಗೆ ನಡೆದು 14 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ 4*100ಮೀಟರ್ ರಿಲೇಯಲ್ಲಿ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಕುಮಾರಿ ನವ್ಯಾ, ಕುಮಾರಿ ದೃತಿ ಕೆ.ರೈ, ಕುಮಾರಿ ತೀಕ್ಷ ಎಸ್, ಕುಮಾರಿ ಫಾತಿಮಾ ಫಿದಾ ಹಾಗೂ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಕುಮಾರಿ ಡಿಂಪಲ್ ಶೆಟ್ಟಿ, ಕುಮಾರಿ ಕೃತಿ ಅವರು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ, ಚಿನ್ನದ ಪದಕವನ್ನು ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಿಜೇತರಾದ ವಿಧ್ಯಾರ್ಥಿಗಳಿಗೆ ಮತ್ತು ತರಬೇತಿಗೊಳಿಸಿದ ದೈಹಿಕ ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದ ಪೋಷಕರುಗಳಿಗೆ ಶಾಲಾ ಸಂಚಾಲಕರಾದ ರೆವರೆಂಡ್ ಫಾದರ್ ಅರುಣ್ ವಿಲ್ಸನ್ ಲೋಬೋ ಮತ್ತು ಪ್ರಾಂಶುಪಾಲರಾದ ರೆವರೆಂಡ್ ಫಾದರ್ ಅಮಿತ್ ಪ್ರಕಾಶ್ ರೋಡ್ರಿಗಸ್ ಅಭಿನಂದಿಸಿದರು.

Leave a Reply

You May Have Missed

error: Content is protected !!