ಕಡಬ: ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅನ್ವಿತಾ ಶೆಟ್ಟಿ ದಕ್ಷಿಣ ಭಾರತ ಯೋಗಾಸನ ಕ್ರೀಡಾ ಸ್ಪರ್ಧೆ ಯಲ್ಲಿ ಪ್ರಥಮ ಸ್ಥಾನ

ಕಡಬ: ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅನ್ವಿತಾ ಶೆಟ್ಟಿ ದಕ್ಷಿಣ ಭಾರತ ಯೋಗಾಸನ ಕ್ರೀಡಾ ಸ್ಪರ್ಧೆ ಯಲ್ಲಿ ಪ್ರಥಮ ಸ್ಥಾನ

ಕಡಬ: ಕರ್ನಾಟಕ ಸರ್ಕಾರ ಜಿಲ್ಲಾಡಳಿತ-ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮೈಸೂರು, ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ S.ಉ.S, ಅಂತಾರಾಷ್ಟ್ರೀಯ ಯೋಗ ಪ್ರತಿಷ್ಠಾನ ಹಾಗೂ ಮೈಸೂರು ಯೋಗ ಒಕ್ಕೂಟದವರ ಸಹಯೋಗದೊಂದಿಗೆ ರಾಷ್ಟ್ರೀಯ ಹಬ್ಬಗಳ ಆಚರಣೆಯ ಅಂಗವಾಗಿ ದಕ್ಷಿಣ ಭಾರತ ಯೋಗಾಸನ ಕ್ರೀಡಾ ಸ್ಪರ್ಧೆ ಮೈಸೂರು ನಲ್ಲಿ ನಡೆಯಿತು.

9 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ನಿರಂತರ ಯೋಗ ಕೇಂದ್ರ ಪಂಜ ದ ವಿದ್ಯಾರ್ಥಿ ಅನ್ವಿತಾ ಶೆಟ್ಟಿ ಪ್ರಥಮ ಸ್ಥಾನ ಪಡೆದಿರುತ್ತಾರೆ.
ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆ ಕಡಬದಲ್ಲಿ 3ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಪಲ್ಲೋಡಿ(ಪಂಜ) ಜಗನ್ನಾಥ ಶೆಟ್ಟಿ ಮತ್ತು ಶ್ರೀಮತಿ ಜಯಲಕ್ಷ್ಮಿ. ಜೆ. ಶೆಟ್ಟಿ ರವರ ಪುತ್ರಿ, ಶರತ್ ಮರ್ಗಿಲಡ್ಕ ಇವರಿಗೆ ಮಾರ್ಗದರ್ಶನ ನೀಡಿರುತ್ತಾರೆ.

Leave a Reply

You May Have Missed

error: Content is protected !!