ಅಕ್ರಮ ಮರಳುಗಾರಿಕೆಗೆ ಬ್ರೇಕ್: ಲಾರಿ, ಮರಳು ವಶಪಡಿಸಿಕೊಂಡ ಪೊಲೀಸರು

ಅಕ್ರಮ ಮರಳುಗಾರಿಕೆಗೆ ಬ್ರೇಕ್: ಲಾರಿ, ಮರಳು ವಶಪಡಿಸಿಕೊಂಡ ಪೊಲೀಸರು

ಮಂಗಳೂರು: ಅಕ್ರಮ ಮರಳುಗಾರಿಕೆ ನಿಯಂತ್ರಣ ಕಾರ್ಯಾಚರಣೆ ನಡೆಸಿರುವ ಮಂಗಳೂರು ಪೊಲೀಸರು ಲಾರಿ, ಹಿಟಾಚಿ ಮತ್ತು ಮರಳು ವಶಪಡಿಸಿಕೊಂಡಿದ್ದಾರೆ.
ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಆರ್‌. ಜೈನ್‌ ಅವರ ಸೂಚನೆಯಂತೆ ಕಾರ್ಯಾಚರಣೆ ನಡೆಸಲಾಗಿದ್ದು ಫೆ. 25ರಂದು ಪಣಂಬೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಎಂಆರ್‌ಪಿಎಲ್‌ ಮೇಲ್ಸೇತುವೆ ಬಳಿ ಸುಮಾರು 10 ಟನ್‌ ಮರಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 2 ಲಾರಿಗಳನ್ನು ಪಣಂಬೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಫೆ.26ರಂದು ತಣ್ಣೀರುಬಾವಿಯಲ್ಲಿ ಸುಮಾರು 15 ಟನ್‌ ಮರಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 2 ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ.

ಫೆ.28ರಂದು ಕಂಕನಾಡಿ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಆಡಂಕುದ್ರು ಎಂಬಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್‌ ಲಾರಿ ಮತ್ತು ಸುಮಾರು 2 ಯುನಿಟ್‌ ಮರಳನ್ನು ವಶಪಡಿಸಿಕೊಳ್ಳಲಾಗಿದೆ. ಮಾ.1ರಂದು ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಸೋಮನಾಥ ಉಳಿಯ ದೇವಸ್ಥಾನದ ಬಳಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ 10 ಲೋಡ್‌ ಮರಳು ಹಾಗೂ 1 ಹಿಟಾಚಿ ವಾಹನವನ್ನು ಉಳ್ಳಾಲ ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಳ್ಳಲಾದ ಸೊತ್ತುಗಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಲಾಗಿದೆ.

Leave a Reply

You May Have Missed

error: Content is protected !!