ಲೋಕಾಯುಕ್ತ ಖೆಡ್ಡಾಗೆ ಬಿದ್ದ ಬಿಜೆಪಿ ಶಾಸಕನ ಪುತ್ರ: 40 ಲಕ್ಷ ರೂ. ಲಂಚ ಪಡೆಯುತ್ತಿದ್ದ ಕೆಎಎಸ್‌ ಅಧಿಕಾರಿ

ಲೋಕಾಯುಕ್ತ ಖೆಡ್ಡಾಗೆ ಬಿದ್ದ ಬಿಜೆಪಿ ಶಾಸಕನ ಪುತ್ರ: 40 ಲಕ್ಷ ರೂ. ಲಂಚ ಪಡೆಯುತ್ತಿದ್ದ ಕೆಎಎಸ್‌ ಅಧಿಕಾರಿ

ಬೆಂಗಳೂರು: ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಅವರ ಮೇಲಿನ ಲೋಕಾಯುಕ್ತ ದಾಳಿಗೆ ಮತ್ತಷ್ಟು ತಿರುವು ಸಿಕ್ಕಿದೆ. ಮಾಡಾಳ್ ಪ್ರಶಾಂತ್ ಮನೆಯಲ್ಲಿ ಆರು ಕೋಟಿ ರೂ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

ಪುತ್ರ ಪ್ರಶಾಂತ್ ಮಾಡಾಳ್ ಅವರ ಮನೆ ಮೇಲೆ ಲೋಕಾಯುಕ್ತದ ಭ್ರಷ್ಟಾಚಾರ ನಿಗ್ರಹ ದಳ ಗುರುವಾರ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಹಣದ ರಾಶಿ ಪತ್ತೆಯಾಗಿದೆ. ತಡರಾತ್ರಿಯವರೆಗೂ ಹುಡುಕಾಟ ನಡೆದಿದೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿಯ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಮೈಸೂರು ಸ್ಯಾಂಡಲ್ ಸೋಪ್ ತಯಾರಿಸುವ ಸರ್ಕಾರಿ ಸ್ವಾಮ್ಯದ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ಅಧ್ಯಕ್ಷರಾಗಿದ್ದಾರೆ. ಅವರ ಮಗ ಪ್ರಶಾಂತ್ ಮಾಡಾಳ್ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ (ಬಿಡಬ್ಲ್ಯೂಎಸ್ಎಸ್ ಬಿ) ಮುಖ್ಯ ಅಕೌಂಟೆಂಟ್ ಆಗಿದ್ದಾರೆ.
ಗುತ್ತಿಗೆದಾರ ಬಳಿ 80 ಲಕ್ಷ ರೂ.ಗೂ ಹೆಚ್ಚು ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಕ್ರೆಸೆಂಟ್ ರಸ್ತೆಯಲ್ಲಿರುವ ಕಚೇರಿಯಲ್ಲಿ ಮುಂಗಡವಾಗಿ 40 ಲಕ್ಷ ರೂ. ಹಣ ಪಡೆದುಕೊಳ್ಳುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಬಿದಿದ್ದಾರೆ.

Previous post

ಇಚ್ಲಂಪಾಡಿ: ನೇರ್ಲ ಸಂಕೀರ್ಣದ ಬಳಿ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಜನ್ಮ ದಿನದ ಪ್ರಯುಕ್ತ ಅಪ್ಪು ಮೆಲೋಡಿಸ್ ಅರ್ಪಿಸುವ ರಸಮಂಜರಿ , ಡ್ಯಾನ್ಸ್ ಇನ್ಸಿಟ್ಯೂಟ್ ಅವಾರ್ಡ್ ಪುರಸ್ಕೃತ ಜೇಸಿ ಕುಶಾಲಪ್ಪ ಸಾರಥ್ಯದ ನಟವರ್ಯ ಡ್ಯಾನ್ಸ್ ಸ್ಟುಡಿಯೋ ನೆಲ್ಯಾಡಿ ಇವರಿಂದ ನಾಟ್ಯ ವೈಭವ

Next post

ಭ್ರಷ್ಟ ಗ್ರಾಮಕರಣಿಕನಿಗೆ 4 ವರ್ಷ ಜೈಲು

Leave a Reply

You May Have Missed

error: Content is protected !!