ಮಾ.9 ರಂದು ರಾಜ್ಯಾದ್ಯಂತ ಸಾಂಕೇತಿಕ ಬಂದ್

ಮಾ.9 ರಂದು ರಾಜ್ಯಾದ್ಯಂತ ಸಾಂಕೇತಿಕ ಬಂದ್

ಬೆಂಗಳೂರು : ಮಾ.9 ರಂದು ರಾಜ್ಯ ಸರಕಾರದ ಭ್ರಷ್ಟಾಚಾರ ಹಾಗೂ 40% ಕಮಿಷನ್ ವಿರುದ್ಧ ರಾಜ್ಯಾದ್ಯಂತ ಸಾಂಕೇತಿಕ ಬಂದ್ ಗೆ ಕಾಂಗ್ರೆಸ್ ಕರೆ ನೀಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ಮಾ.9 ರಂದು ದ್ವಿತೀಯ ಪಿಯುಸಿ ಮೊದಲ ಪರೀಕ್ಷೆ ಇದ್ದು, ಬಂದ್ ಕರೆದಿರುವ ಬಗ್ಗೆ ಕೇಳಿದಾಗ, ‘ನಾವು ದ್ವಿತೀಯ ಪಿಯುಸಿ ಪರೀಕ್ಷೆ, ಶೈಕ್ಷಣಿಕ ಸಂಸ್ಥೆಗಳು, ಸಾರಿಗೆ ಹಾಗೂ ಆಸ್ಪತ್ರೆ ಸೇವೆಗಳಿಗೆ ಅಡ್ಡಿಪಡಿಸುವುದಿಲ್ಲ. ಕಾನೂನು ಕೈಗೆತ್ತಿಕೊಳ್ಳುವುದಿಲ್ಲ. ಕೇವಲ ವ್ಯಾಪಾರ ವಹಿವಾಟಗಳನ್ನು 2 ಗಂಟೆಗಳ ಕಾಲ ಬಂದ್ ಮಾಡಿ ಭ್ರಷ್ಟ ಸರ್ಕಾರ ಕಿತ್ತೊಗೆಯಲು ಸಹಕಾರ ನೀಡಿ ಎಂದು ಮನವಿ ಮಾಡಿದ್ದೇವೆ’ ಎಂದರು.

Leave a Reply

You May Have Missed

error: Content is protected !!