ಪುಂಜಾಲಕಟ್ಟೆ: ಕಾರು ಢಿಕ್ಕಿ, ದ್ವಿಚಕ್ರ ವಾಹನ ಸವಾರ ಸಾವು

ಪುಂಜಾಲಕಟ್ಟೆ: ಕಾರು ಢಿಕ್ಕಿ, ದ್ವಿಚಕ್ರ ವಾಹನ ಸವಾರ ಸಾವು

ಪುಂಜಾಲಕಟ್ಟೆ: ಕಾರೊಂದು ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮವಾಗಿ ದ್ವಿಚಕ್ರ ವಾಹನ ಸವಾರ ಮೃತಪಟ್ಟು ಇನ್ನೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಸಮೀಪದ ರಾಯಿ ಎಂಬಲ್ಲಿ ಮಾ.12 ರಂದು ರಾತ್ರಿ ಸಂಭವಿಸಿದೆ.
ಬಂಟ್ವಾಳ ಬೈಪಾಸ್ ನಿವಾಸಿ, ವಿದ್ಯುತ್ ಗುತ್ತಿಗೆದಾರ ಚಂದ್ರಶೇಖರ(50) ಮೃತಪಟ್ಟ ವ್ಯಕ್ತಿ. ಚಾಲಕ ಬಂಟ್ವಾಳ ನಿವಾಸಿ ಇಡ್ಲಿ ಯೋಗೀಶ್ ತಲೆಗೆ ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ.

ರಾತ್ರಿ ಸುಮಾರು 11 ಗಂಟೆಗೆ ಸಿದ್ದಕಟ್ಟೆಯಿಂದ ಬಂಟ್ವಾಳ ಕಡೆ ಬರುತ್ತಿದ್ದ ವೇಳೆ ರಾಯಿ ಎಂಬಲ್ಲಿ ಹಿಂಬದಿಯಿಂದ ಬರುತ್ತಿದ್ದ ಕಾರು ಢಿಕ್ಕಿಯಾಗಿದೆ. ಢಿಕ್ಕಿಯಾದ ರಭಸಕ್ಕೆ ದ್ವಿಚಕ್ರದಲ್ಲಿ ಹಿಂಬದಿಯ ಸವಾರ ಚಂದ್ರಶೇಖರ ರಸ್ತೆಗೆ ಎಸೆಯಲ್ಪಟ್ಟು ಸಾವನ್ನಪ್ಪಿದ್ದಾರೆ.
ಚಾಲಕ ಯೋಗೀಶ್ ಅವರ ತಲೆಗೆ ಗಂಭೀರವಾಗಿ ಗಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರು ಚಾಲಕನ ಅತಿವೇಗದ ಹಾಗೂ ಅಜಾಗರೂಕತೆಯ ಚಾಲನೆಯೆ ಘಟನೆಗೆ ಕಾರಣವೆನ್ನಲಾಗಿದೆ.
ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Leave a Reply

You May Have Missed

error: Content is protected !!