ಮಾಧ್ಯಮ ಕ್ಷೇತ್ರದ ಸಾಧನೆಗಾಗಿ ಡಾ.ಯು.ಪಿ.ಶಿವಾನಂದರಿಗೆ ಪ್ರತಿಷ್ಠಿತ ಮೊಹರೆ ಹಣಮಂತರಾಯ ಪ್ರಶಸ್ತಿ

ಮಾಧ್ಯಮ ಕ್ಷೇತ್ರದ ಸಾಧನೆಗಾಗಿ ಡಾ.ಯು.ಪಿ.ಶಿವಾನಂದರಿಗೆ ಪ್ರತಿಷ್ಠಿತ ಮೊಹರೆ ಹಣಮಂತರಾಯ ಪ್ರಶಸ್ತಿ

ಬೆಳ್ತಂಗಡಿ: ಮಾಧ್ಯಮ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಾಗಿ ರಾಜ್ಯ ಸರಕಾರದ ಪ್ರತಿಷ್ಠಿತ ಮೊಹರೆ ಹಣಮಂತರಾಯ ಪ್ರಶಸ್ತಿಗೆ ಆಯ್ಕೆಯಾಗಿರುವ ಸುದ್ದಿ ಬಿಡುಗಡೆ ಪ್ರಧಾನ ಸಂಪಾದಕ, ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ.ಶಿವಾನಂದರವರಿಗೆ ಮಾ.13ರಂದು ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.ಕಂದಾಯ ಸಚಿವ ಆರ್.ಅಶೋಕ್,ಮಾಜಿ ಸಂಸದ ವಿಜಯ ಸಂಕೇಶ್ವರ, ಪಬ್ಲಿಕ್ ಟಿವಿಯ ಮುಖ್ಯಸ್ಥ ಹೆಚ್.ಆರ್.ರಂಗನಾಥ್, ವಾರ್ತಾ ಇಲಾಖೆಯ ಆಯುಕ್ತ ಡಾ.ಪಿ.ಎಸ್.ಹರ್ಷ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಬೆಳ್ತಂಗಡಿ, ಪುತ್ತೂರು, ಸುಳ್ಯದಲ್ಲಿ ಸುದ್ದಿ ಬಿಡುಗಡೆ ಪತ್ರಿಕೆ ಮಾತ್ರವಲ್ಲದೆ ಮಾಹಿತಿ, ಸುದ್ದಿ ವೆಬ್‌ಸೈಟ್, ಸುದ್ದಿ ನ್ಯೂಸ್ ಚಾನೆಲ್ ಆರಂಭಿಸಿ ಮಾಧ್ಯಮ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಾಗಿ ಡಾ.ಯು.ಪಿ.ಶಿವಾನಂದವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Leave a Reply

You May Have Missed

error: Content is protected !!