ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ: ಅರ್ಜಿ ಆಹ್ವಾನ

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತಿಗಳ ಗ್ರಂಥಾಲಯಗಳಲ್ಲಿ ಖಾಲಿ ಇರುವ 12 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ 18 ವರ್ಷ ಮೇಲ್ಪಟ್ಟ, ದ್ವಿತೀಯ ಪಿಯುಸಿ ಉತ್ತೀರ್ಣರಾಗಿರುವ, ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್‌ನಲ್ಲಿ ಪ್ರಮಾಣ ಪತ್ರ ಹೊಂದಿರುವ, ಕನಿಷ್ಟ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರುವ ಹಾಗೂ ಸಂಬಂಧಪಟ್ಟ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕುಂದಾಪುರ ತಾಲೂಕಿನ ಹೊಸಂಗಡಿ, ಇಡೂರು ಕುಂಜ್ಞಾಡಿ, ಉಳ್ಳೂರು, ಕಟ್‌ಬೇಲ್ತೂರು, ಕೊರ್ಗಿ, ಗುಲ್ವಾಡಿ ಹಾಗೂ ಯಡಮೊಗೆ ಮತ್ತು ಕಾರ್ಕಳ ತಾಲೂಕಿನ ನಂದಳಿಕೆ, ಇರ್ವತ್ತೂರು, ಕಲ್ಯಾ, ಕೆರ್ವಾಶೆ ಮತ್ತು ಬೋಳ ಗ್ರಾಮ ಪಂಚಾಯತ್‌ಗಳಲ್ಲಿ ತಲಾ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಎಪ್ರಿಲ್ 4 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಗ್ರಾಮ ಪಂಚಾಯತ್‌ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಓ) ಅನ್ನು ಸಂಪರ್ಕಿಸಬಹುದು ಎಂದು ಜಿಪಂನ ಉಪ ಕಾರ್ಯದರ್ಶಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Leave a Reply

You May Have Missed

error: Content is protected !!