2 ಕೋಟಿ ವೆಚ್ಚದ ಶೆಟ್ಟಿಕಟ್ಟ-ಬೈಲು ನೂತನ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಗುದ್ದಲಿಪೂಜೆ; ಸಚಿವ ಎಸ್. ಅಂಗಾರ

2 ಕೋಟಿ ವೆಚ್ಚದ ಶೆಟ್ಟಿಕಟ್ಟ-ಬೈಲು ನೂತನ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಗುದ್ದಲಿಪೂಜೆ; ಸಚಿವ ಎಸ್. ಅಂಗಾರ

ಸುಳ್ಯ ತಾಲೂಕಿನ ಕಲ್ಮಕಾರು ಗ್ರಾಮದ ಶೆಟ್ಟಿಕಟ್ಟ ಎಂಬಲ್ಲಿ ಬಹುಕಾಲದ ಬೇಡಿಕೆಯಾದ ಶೆಟ್ಟಿಕಟ್ಟ-ಬೈಲು ಸಂಪರ್ಕ ಸೇತುವೆಗೆ ರೂ. 2.00 ಕೋಟಿ ವೆಚ್ಚದಲ್ಲಿ ನೂತನ ಸೇತುವೆ ನಿರ್ಮಾಣಕ್ಕೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಇಂದು ಗುದ್ದಲಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಸುಳ್ಯ ಬಿ.ಜೆ.ಪಿ ಮಂಡಲಾಧ್ಯಕ್ಷರಾದ ಹರೀಶ್ ಕಂಜಿಪಿಲಿ, ದ.ಕ. ಜಿಲ್ಲಾ ಬಿ.ಜೆ.ಪಿ ಉಪಾಧ್ಯಕ್ಷರಾದ ವೆಂಕಟ್ ವಳಲಂಬೆ, ಜಿಲ್ಲಾ ಬಿ.ಜೆ.ಪಿ ಪ್ರಧಾನ ಕಾರ್ಯದರ್ಶಿ ಕೇಶವ ಭಟ್ ಮುಳಿಯ, ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ ಹಾಗೂ ಗ್ರಾ.ಪಂ ಸದಸ್ಯರಾದ ಅಶ್ವಥ್ ಯಲದಾಳು, ಪುಷ್ಪರಾಜ್ ಪಡ್ಪು, ಪಕ್ಷದ ಪ್ರಮುಖರಾದ ಡ್ಯಾನಿ ಯಲದಾಳು, ಉದಯ ಶಿವಾಲ ಹಾಗೂ ಊರಿನ ಹಿರಿಯರು ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!