ಬಸ್ ಢಿಕ್ಕಿ: ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

ಬಸ್ ಢಿಕ್ಕಿ: ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

ಮಂಗಳೂರು: ರಸ್ತೆ ದಾಟುತ್ತಿದ್ದ ವೇಳೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಬೆಂದೂರ್ ವೆಲ್ ಬಳಿ ಗುರುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಂಭವಿಸಿದೆ.

ಮೃತರನ್ನು ಐರಿನ್ ಡಿಸೋಜ(55) ಎಂದು ಗುರುತಿಸಲಾಗಿದೆ.
ಆ್ಯಗ್ನೆಸ್ ಸರ್ಕಲ್ ಕಡೆಯಿಂದ ಬಂದ ಸಿಟಿ ಬಸ್ ಬೆಂದೂರ್ ವೆಲ್ ಜಂಕ್ಷನ್ ನಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿದೆ. ಈ ವೇಳೆ ಅದೇ ಬಸ್ಸಿನಿಂದ ಇಳಿದು ಬಸ್ಸಿನ ಮುಂಭಾಗದಿಂದ ರಸ್ತೆ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ಐರಿನ್ ಅವರ ಮೈಮೇಲೆ ಬಸ್ಸಿನ ಮುಂಭಾಗದ ಚಕ್ರ ಹರಿದಿದೆ. ಇದರಿಂದ ತೀವ್ರ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ.
ಅಪಘಾತದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಸಾರ್ವಜನಿಕರು ಸ್ಥಳದಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ಪ್ರದೇಶದಲ್ಲಿ ಪದೇಪದೇ ಅಪಘಾತವಾಗುತ್ತಿದೆ. ಪೊಲೀಸ್ ಇಲಾಖೆ ಈ ಬಗ್ಗೆ ಸೂಕ್ತ ಕ್ರಮ ಜರುಗಿಸುತ್ತಿಲ್ಲ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟಿಸಿದರು.

Previous post

ಪರೀಕ್ಷಾ ಮುನ್ನಾ ದಿನವೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನಾಪತ್ತೆ. ನದಿಯಲ್ಲಿ ಶವ ಪತ್ತೆ: ಪರೀಕ್ಷೆಗೆ ಹೆದರಿ ಆತ್ಮಹತ್ಯೆ ?

Next post

ಯಕ್ಷಗಾನ, ಕೋಲ,ಮದುವೆ ನಡೆಸಬಹುದೇ..? ಚುನಾವಣಾ ನೀತಿ ಸಂಹಿತೆ ಬಗ್ಗೆ ದ.ಕನ್ನಡ ಡಿಸಿ ಮಾಹಿತಿ

Leave a Reply

You May Have Missed

error: Content is protected !!